Publish Date: Sun, 10 Sep 2023 (12:02 IST)
Updated Date: Sun, 10 Sep 2023 (12:03 IST)
ಬೆಳಗಾವಿ : ಎಲೆಕ್ಷನ್ ಯಾವ ರೀತಿ ಮಾಡಬೇಕು ಎಂಬುದು ನಮಗೆ ಗೊತ್ತಿದೆ. ಜನರ ಆಶೋತ್ತರಗಳೇನು ಎಂಬ ಬಗ್ಗೆಯೂ ಗೊತ್ತು. ಅವುಗಳನ್ನು ಈಡೇರಿಸುತ್ತಿದ್ದು, ಒಳ್ಳೆಯ ರೀತಿಯಿಂದ ಸರ್ಕಾರ ನಡೆಸುತ್ತಿದ್ದೇವೆ. ಹೀಗಾಗಿ ಅವರು ಮೈತ್ರಿ ಮಾಡಿಕೊಂಡರೆ ನಾವು ಸ್ವಾಗತಿಸುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಹಿಂದೆ ಜೆಡಿಎಸ್ ಯುಪಿಎ ಒಕ್ಕೂಟದಲ್ಲಿತ್ತು ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಜೆಡಿಎಸ್ನವರ ಮುಖವಾಡ ಕಳಚಿತು. ಅದರ ಬಗ್ಗೆ ಹಿರಿಯರು, ದೊಡ್ಡವರು ಮಾತನಾಡುತ್ತಾರೆ ಎಂದರು.
ಬಿಜೆಪಿ-ಜೆಡಿಎಸ್ನವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವ ಭಯದಿಂದ ಮೈತ್ರಿ ಮಾಡಿಕೊಳ್ಳುತ್ತಿದ್ದಾರಾ ಎಂಬ ವಿಚಾರಕ್ಕೆ, ಯರ್ಯಾರು ಕಾಂಗ್ರೆಸ್ಗೆ ಬರುತ್ತಿದ್ದಾರೆ ಮತ್ತು ಯಾರಿಗೆ ಭಯ ಇದೆ ಅಂತಾನೂ ನನಗೆ ಗೊತ್ತಿಲ್ಲ ಎಂದು ಹೇಳಿದರು.