Webdunia - Bharat's app for daily news and videos

Install App

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲೂ ಸ್ಪರ್ಧೆ: ಜೆಡಿಎಸ್

Webdunia
ಗುರುವಾರ, 20 ಏಪ್ರಿಲ್ 2017 (20:19 IST)
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ರಮೇಶ್‌ಬಾಬು ಹೇಳಿದ್ದಾರೆ.
 
ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  224 ಕ್ಷೇತ್ರಗಳಲ್ಲೂ ಬೂತ್ ಮಟ್ಟದ ಸಮಿತಿ ರಚಿಸಲಾಗುವುದು. ಒಂದು ವೇಳೆ, ಅವಧಿಪೂರ್ವ ಚುನಾವಣೆ ಎದುರಾದಲ್ಲಿ ಅದಕ್ಕೂ ಸಿದ್ದತೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ 20 ತಿಂಗಳ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಮತ್ತು ಪಕ್ಷದ ವರಿಷ್ಠ ದೇವೇಗೌಡರು ಪ್ರಧಾನಿಯಾಗಿದ್ದಾಗ ಮಾಡಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ಮುಟ್ಟಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
 
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಜೆಡಿಎಸ್ ಮುಖಂಡ ರಮೇಶ್‌ಬಾಬು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯಾಘಾತವಾಗುವಾಗ ಮುಖದಲ್ಲಿ ಈ ಬದಲಾವಣೆಯಾಗುತ್ತದೆ

ಬೇರೊಬ್ಬನ ಜತೆ ನಿಶ್ಚಿತಾರ್ಥ: ಆಟೊದಲ್ಲೇ ನೇಣಿಗೆ ಶರಣಾದ ಸ್ಥಿತಿಯಲ್ಲಿ ಪ್ರೇಮಿಗಳು ಪತ್ತೆ

ಹಾಸನದಲ್ಲಿ ಮತ್ತೊಂದು ಹೃದಯಾಘಾತ: ನವವಿವಾಹಿತ ಸಾವು

ತಮಿಳುನಾಡು ವ್ಯಕ್ತಿಯ ಲಾಕಪ್ ಡೆತ್ ಪ್ರಕರಣ: ಐದು ಪೊಲೀಸರು ಅರೆಸ್ಟ್‌

ಮೂರು ವರ್ಷಗಳಿಂದ ಫ್ಲ್ಯಾಟ್ ನಲ್ಲಿ ಲಾಕ್ ಮಾಡಿಕೊಂಡಿದ್ದ ವ್ಯಕ್ತಿ: video

ಮುಂದಿನ ಸುದ್ದಿ
Show comments