Publish Date: Thu, 16 Mar 2017 (14:13 IST)
Updated Date: Thu, 16 Mar 2017 (14:17 IST)
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ರಾಜ್ಯದ 224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಬಗ್ಗೆ ಕುಮಾರಸ್ವಾಮಿ ಜಗದೀಶ್ ಶೆಟ್ಟರ್ ಮಾತನಾಡಿದ್ದಾರೆ. ನಾನು ಬಜೆಟ್ ಬಗ್ಗೆ ರಿಯಾಕ್ಟ್ ಮಾಡುವುದಿಲ್ಲ. ಹಾರಿಕೆಯ ಉತ್ತರ ನೀಡುವುದು ನನಗಿಷ್ಟವಿಲ್ಲ ಎಂದರು.
ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುತ್ತಿಲ್ಲ. ಜೆಡಿಎಸ್ ಕಾರ್ಯಕರ್ತರು ತಟಸ್ಥರಾಗಿರಲಿ. ಉಪಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎನ್ನುವುದು ಭ್ರಮೆ ಎಂದು ಹೇಳಿದ್ದಾರೆ.
ಉಫಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳ ಹಣಬಲದ ಮುಂದೆ ಹೋರಾಡಲು ಪ್ರಾದೇಶಿಕ ಪಕ್ಷಗಳಿಗೆ ಸಾಧ್ಯವಾಗುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.