Select Your Language

Notifications

webdunia
webdunia
webdunia
webdunia

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ: ಕುಮಾರಸ್ವಾಮಿ

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ: ಕುಮಾರಸ್ವಾಮಿ
ಮಂಗಳೂರು , ಸೋಮವಾರ, 17 ಏಪ್ರಿಲ್ 2017 (16:39 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಚುನಾವಣಾ ಪೂರ್ವ ಅಥವಾ ನಂತರವಾಗಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುತ್ತದೆ ಎನ್ನುವ ವರದಿಗಳು ಆಧಾರರಹಿತ ಮತ್ತು ಸತ್ಯಾಂಶಕ್ಕೆ ದೂರವಾಗಿವೆ. ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಎಂದು ತಿಳಿಸಿದ್ದಾರೆ.
 
ಒಂದು ವೇಳೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರದಿದ್ದರೆ, ಜನಾದೇಶಕ್ಕೆ ಹೋಗುತ್ತೇವೆಯೇ ಹೊರತು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದರು.
 
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳ ಭ್ರಷ್ಟಾಚಾರ ಮತ್ತು ವೈಫಲ್ಯಗಳನ್ನು ಜನತೆಯ ಮುಂದಿಟ್ಟು ಚುನಾವಣೆ ಎದುರಿಸುತ್ತೇವೆ. ರಾಜ್ಯದ ಜನತೆ ನಮಗೂ ಒಂದು ಅವಕಾಶ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಇಂದು ಬೆಂಗಳೂರಿಗೆ