ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ಸೋಮವಾರ, 23 ಡಿಸೆಂಬರ್ 2019 (11:32 IST)
ಜಾರ್ಖಂಡ್ : ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಇದರಲ್ಲಿ ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ  ಬಹುಮತ  ಲಭಿಸಿರುವುದರ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದೆ .



ಇಂದು ಮತೆಣಿಕೆ ಕಾರ್ಯ ನಡೆದಿದ್ದು ಇದರಲ್ಲಿ 81 ವಿಧಾನಸಭಾ ಕ್ಷೇತ್ರದಲ್ಲಿ 43ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದರೆ,  27 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.


81 ವಿಧಾನಸಭೆ ಸ್ಥಾನದ ಬಲಾಬಲದಲ್ಲಿ 41 ಮ್ಯಾಂಜಿಕ್ ನಂಬರ್ ಆಗಿದ್ದು, ಜೆಎಂಎಂ-ಕಾಂಗ್ರೆಸ್-ಆರ್ಜೆಡಿ ಮೈತ್ರಿಗೆ 43ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ದೊರಕಿದ್ದು, ಆ ಮೂಲಕ ಸರಳ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ