Select Your Language

Notifications

webdunia
webdunia
webdunia
webdunia

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಜಿಗ್ನೇಶ್ ಮೇವಾನಿ

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಜಿಗ್ನೇಶ್ ಮೇವಾನಿ
ಚಿತ್ರದುರ್ಗ , ಶನಿವಾರ, 7 ಏಪ್ರಿಲ್ 2018 (10:02 IST)
ಚಿತ್ರದುರ್ಗ : ಪ್ರಧಾನಿ ನರೇಂದ್ರ ಮೋದಿ ಅವರ  ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಗುಜರಾತ್ ಶಾಸಕ, ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಅವರು ಮೋದಿ ಅವರ ಚುನಾವಣಾ ಪ್ರಚಾರ ಸಭೆಗಳಲ್ಲಿ ಕುರ್ಚಿಗಳನ್ನು ತೂರಾಡಿ ಗದ್ದಲವೆಬ್ಬಿಸಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಜಿಲ್ಲೆಯಲ್ಲಿ ಏರ್ಪಡಿಸಿದ್ದ ಸಂವಿಧಾನ ಉಳಿವಿಗಾಗಿ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘2 ಕೋಟಿ ಉದ್ಯೋಗ ಸೃಷ್ಟಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿ ಎಂದು ಕರೆ ನೀಡಿದ್ದಾರೆ. ಈ ವೇಳೆ ಅವರ ಪ್ರಚಾರ ಕಾರ್ಯಕ್ರಮದಲ್ಲಿ ಕುರ್ಚಿಗಳನ್ನು ತೂರಾಡಿ ಗದ್ದಲವೆಬ್ಬಿಸಿ’ ಎಂದು ಹೇಳಿದ್ದಾರೆ.


‘ಈ ದೇಶದ ಯುವಕರನ್ನ ಮೋದಿ ಸರ್ಕಾರ ನಿರುದ್ಯೋಗಿಗಳನ್ನಾಗಿ ಮಾಡಿದೆ. ಕರ್ನಾಟಕದ ಯುವಕರಿಗೆ ಕಿವಿಮಾತು ಹೇಳುತ್ತೇನೆ. ಮೋದಿಯವರು ಚುನಾವಣೆಗೆ ಬಂದಾಗ ಕೇಳಬೇಕು ನಿಮ್ಮ ಎರಡು ಕೋಟಿ ಉದ್ಯೋಗ ಎಲ್ಲಿದೆ. ಉದ್ಯೋಗ ಸೃಷ್ಟಿಸಲು ಸಾಧ್ಯವಾಗದೇ ಇದ್ದರೆ ಹಿಮಾಲಯದ ರಾಮಮಂದಿರದಲ್ಲಿ ಗಂಟೆ ಬಾರಿಸಲು ಹೋಗಲು ಹೇಳಿ. ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸ ಬೇಕಿದೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಮಿತ್ ಶಾ ಜೈನ ಸಮುದಾಯದವರು ಎಂದಿದ್ದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು