ಬಿಬಿಎಂಪಿಯಲ್ಲಿ ಉದ್ಯೋಗ ಖಾಲಿ- ಕಾಲಾವಕಾಶ ಎಲ್ಲಿವರೆಗೂ ಗೊತ್ತಾ?
bangalore , ಶುಕ್ರವಾರ, 12 ನವೆಂಬರ್ 2021 (17:45 IST)
ಬೆಂಗಳೂರು, ನವೆಂಬರ್ 12; ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಬೆಂಗಳೂರು ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ರಿ) ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನವೆಂಬರ್ 15ರಂದು ಹುದ್ದೆಗಳ ಭರ್ತಿಗೆ ನೇರ ಸಂದರ್ಶನ ನಡೆಯಲಿದೆ.
ನಗರ ಕಾರ್ಯಕ್ರಮ ವ್ಯವಸ್ಥಾಪಕ (1), ನಗರ ಲೆಕ್ಕಪತ್ರ ವ್ಯವಸ್ಥಾಪಕ (1), ಮಾಹಿತಿ ತಂತ್ರಜ್ಞರು/ ಡೆಟಾ ವ್ಯವಸ್ಥಾಪಕರು (1), ಎಪಿಡೆಮಿಯೋಲಜಿಸ್ಟ್ (1) ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಾಗುತ್ತಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ
ನಗರ ಕಾರ್ಯಕ್ರಮ ವ್ಯವಸ್ಥಾಪಕ 40 ಸಾವಿರ ರೂ., ನಗರ ಲೆಕ್ಕಪತ್ರ ವ್ಯವಸ್ಥಾಪಕ 30 ಸಾವಿರ ರೂ., ಮಾಹಿತಿ ತಂತ್ರಜ್ಞರು/ ಡೆಟಾ ವ್ಯವಸ್ಥಾಪಕರು 50 ಸಾವಿರ ರೂ., ಎಪಿಡೆಮಿಯೋಲಜಿಸ್ಟ್ 25 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.
ಶಿವಮೊಗ್ಗ; ಕೆಲಸ ಖಾಲಿ ಇದೆ, ಡಿ. 8ರೊಳಗೆ ಅರ್ಜಿ ಹಾಕಿ
ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ 18 ವರ್ಷ ತುಂಬಿರಬೇಕು. ಸಾಮಾನ್ಯ ವರ್ಗ 35, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.
ದಾವಣಗೆರೆ; ಕೆಲಸ ಖಾಲಿ ಇದೆ, ನ.30ರೊಳಗೆ ಅರ್ಜಿ ಹಾಕಿ
ಅಭ್ಯರ್ಥಿ ಕನ್ನಡ ಭಾಷಾ ಜ್ಞಾನವನ್ನು ಹೊಂದಿರುವುದು ಅಗತ್ಯವಾಗಿದೆ. ಆಸಕ್ತ ಅಭ್ಯರ್ಥಿಗಳು ಮೂಲ ದಾಖಲೆಗಳ ಜೊತೆ ನೇರ ಸಂದರ್ಶನಕ್ಕೆ ಹಾಜರಾಗಬೇಕಾಗಿದೆ. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080-22110445.
ಈ ಹುದ್ದೆಗಳನ್ನು ಕಡಿತಗೊಳಿಸುವ ಅಥವ ಹೆಚ್ಚಿಸು ಅಧಿಕಾರವನ್ನು ಬೆಂಗಳೂರು ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ರಿ) ಹೊಂದಿದೆ.
ಎಲ್ಲಾ ಹುದ್ದೆಗಳಿಗೆ ನೇರ ಸಂದರ್ಶನ 15 ಮತ್ತು 16 ನವೆಂಬರ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯ ತನಕ ನಡೆಯಲಿದೆ.
ಸಂದರ್ಶನ ನಡೆಯುವ ವಿಳಾಸ; Naukarara Bhavana, BBMP Head Office, Bengaluru, Karnataka on 15-Nov-2021
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಬಿಬಿಎಂಪಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ಉಚಿತ ತರಬೇತಿಗೆ ಅರ್ಜಿ ಆಹ್ವಾನ; ಕೆನರಾ ಬ್ಯಾಂಕ್ ಆರ್‌ಸೆಟ್ ಸಂಸ್ಥೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 30 ದಿನಗಳ ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಸಂಸ್ಥೆಯಲ್ಲಿ ರೆಪ್ರೀಜರೇಶನ್ ಆಂಡ್ ಎರ್-ಕಂಡಿಶನಿಂಗ್ ಮತ್ತು ಇಲೆಕ್ಟ್ರಿಕಲ್ ಮೋಟಾರ್ ವೈಂಡಿಂಗ್ ರಿಪೇರ್ ಉಚಿತ ತರಬೇತಿಗಳನ್ನು ನವೆಂಬರ್ ತಿಂಗಳಲ್ಲಿ ಪ್ರಾರಂಭಿಸಲಾಗುವುದು. ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ.
ತರಬೇತಿ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ ಸಾಫ್ಟ್ ಸ್ಕೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.
ಅರ್ಜಿ ಸಲ್ಲಿಸಲು ಬಯಸುವ ಆಸಕ್ತರಿಗೆ 18 ರಿಂದ 45 ವರ್ಷಗಳ ವಯೋಮಿತಿ ನಿಗದಿಗೊಳಿಸಲಾಗಿದೆ. ನಿರುದ್ಯೋಗಿ ಯುವಕ, ಯುವತಿಯರು ನವೆಂಬರ್ 15ರ ಒಳಗೆ ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಿಕೊಳ್ಳಬೇಕು.
ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಹಾಗೂ ದೂರವಾಣಿ ಸಂಖ್ಯೆ 9483485489, 9482188780, 8197022501, 9743321062, 08284-295307/ 220807ಕ್ಕೆ ಕರೆ ಮಾಡಬಹುದಾಗಿದೆ.
ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಹಾಕಿ; ಕೊಪ್ಪಳ ಜಿಲ್ಲೆಯ ಕನಕಗಿರಿ ಎಸ್. ಪಿ. ಎಸ್. ಜಿ. ಎಸ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ 1, 3, ಮತ್ತು 5 ಸೆಮಿಸ್ಟರುಗಳ ಖಾಲಿ ಇರುವ ಕನ್ನಡ, ಇಂಗ್ಲೀಷ್, ಅರ್ಥಶಾಸ್ತ್ರ, ವಾಣಿಜ್ಯಶಾಸ್ತ್ರ ಗಣಕಯಂತ್ರ, ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಷಯಗಳ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ ನವೆಂಬರ್ 13. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8861319040ಕ್ಕೆ ಸಂಪರ್ಕಿಸಬಹುದು.
ಮುಂದಿನ ಸುದ್ದಿ