Select Your Language

Notifications

webdunia
webdunia
webdunia
Wednesday, 2 April 2025
webdunia

ರಾಜ್ಯದ ನೆಚ್ಚಿನ ಪ್ರವಾಸಿ ತಾಣ ಜೋಗ್ ಫಾಲ್ಸ್‌ಗೆ ಎರಡೂವರೆ ತಿಂಗಳು ನಿರ್ಬಂಧ, ಕಾರಣ ಹೀಗಿದೆ

Shivamogga District Joga Falls

Sampriya

ಶಿವಮೊಗ್ಗ , ಸೋಮವಾರ, 16 ಡಿಸೆಂಬರ್ 2024 (16:39 IST)
Photo Courtesy X
ಶಿವಮೊಗ್ಗ: ಕರ್ನಾಟಕದಲ್ಲಿ ಎಲ್ಲರೂ ಭೇಟಿ ಕೊಡಬೇಕೆಂದೆನಿಸುವ ಪ್ರವಾಸಿ ಸ್ಥಳಗಳಲ್ಲಿ  ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತವೂ ಒಂದಾಗಿದೆ. ಇದೀಗ ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಅಥವಾ ಜೋಗ ಜಲಪಾತ ಪ್ರವಾಸಿಗರ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ.

ಅದರಂತೆ ಜನವರಿ 1ರಿಂದ ಮಾರ್ಚ್​ 15ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಕಾರಣ ಹೀಗಿದೆ: ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಆಗಬಾರದು ಎಂದು ಪ್ರವೇಶ ನಿರ್ಭಂದಿಸಲಾಗಿದೆ.

ಈ ಸಂಬಂಧ ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-251444 ನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ನಂ.1 ಸುಳ್ಳುಗಾರ, ಎಲ್ಲಿ ಹೋಯ್ತು 15 ಲಕ್ಷದ ಭರವಸೆ: ಮಲ್ಲಿಕಾರ್ಜುನ ಖರ್ಗೆ