ನಿನ್ನೆ ಮುಂಬೈನಲ್ಲಿ ಖಾಸಗಿ ವಾಹಿನಿ ವರದಿಗಾರ್ತಿಯ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಕನ್ನಡ ಮಕ್ಕಳ ಪಕ್ಷದ ಶಾಸಕ ಅಶೋಕ್ ಖೇಣಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ಸಾರ್ವಜನಿಕ ಸೇವೆಯಲ್ಲಿರುವ ರಾಜಕಾರಣಿಗಳು ವರದಿಗಾರ್ತಿಯನ್ನು ಕೆಟ್ಟ ಶಬ್ದಗಳಿಂದ ನಿಂದಿಸಿರುವುದು ಮಹಿಳಾ ಸಮಾಜಕ್ಕೆ ಅವಮಾನ ಮಾಡಿದಂತಾಗಿದೆ. ಶಾಸಕ ಅಶೋಕ್ ಖೇಣಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ ಶೆಣೈ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿರುವ ತಾರಾ, ಅವರ ರಾಜೀನಾಮೆ ಹಿಂದಿರುವ ಸತ್ಯಾಂಶವನ್ನು ಬಹಿರಂಗಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ