Publish Date: Thu, 27 Apr 2023 (15:12 IST)
Updated Date: Thu, 27 Apr 2023 (15:58 IST)
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಂದಿನಿಂದ ಎರಡು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಹಲವು ಕಾರ್ಯಕ್ರಮಗಳಲ್ಲಿ ನಡ್ಡಾ ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ BJP ಗೆಲ್ಲಿಸುವ ಸಲುವಾಗಿ ಜೆ.ಪಿ.ನಡ್ಡಾ ರಾಜ್ಯಕ್ಕೆ ಬರ್ತಿದ್ದು, ಚಿಕ್ಕಮಗಳೂರು, ದಾವಣಗೆರೆ, ಗದಗ, ಧಾರವಾಡ, ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮೂಡಿಗೆರೆ, ಸೊರಬ, ಕಲಘಟಗಿ, ಮಾಯಕೊಂಡ, ರೋಣದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಜೊತೆಗೆ ಆಯಾ ಕ್ಷೇತ್ರಗಳ ಕಾರ್ಯಕರ್ತರ ಜೊತೆ ಚುನಾವಣಾ ತಯಾರಿ ಬಗ್ಗೆ ಜೆ ಪಿ ನಡ್ಡಾ ಪ್ರಚಾರ ನಡೆಸಲಿದ್ದಾರೆ.