ಬೆಂಗಳೂರಿಗೆ ದೌಡಾಯಿಸಿ ಬಂದ ಜೆ.ಪಿ. ನಡ್ಡಾ: ರಾಜ್ಯ ಬಿಜೆಪಿ ನಾಯಕರ ಭಿನ್ನಮತಕ್ಕೆ ಸಿಗಲಿದೆಯೇ ಮುಲಾಮು

Sampriya
ಶುಕ್ರವಾರ, 3 ಜನವರಿ 2025 (15:06 IST)
Photo Courtesy X
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಚಟುವಟಿಕೆ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಗುರುವಾರ ಬೆಂಗಳೂರಿಗೆ ದೌಡಾಯಿಸಿದ್ದು, ಪಕ್ಷ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಡ್ಡಾ ಅವರನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಯುವ ಮೋರ್ಚಾ ಅಧ್ಯಕ್ಷ ಧೀರಜ್ ಆತ್ಮೀಯವಾಗಿ ಬರಮಾಡಿಕೊಂಡರು.

ಬಳಿಕ ವಿಮಾನ ನಿಲ್ದಾಣದ ವಿಐಪಿ ಲಾಂಜ್​​ನಲ್ಲಿ ನಡ್ಡಾ ಅವರು, ರಾಜ್ಯ ಬಿಜೆಪಿ ನಾಯಕನ ಜೊತೆ ನಡ್ಡಾ ಮಾತುಕತೆ ನಡೆಸಿದರು. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಹೇಗೆ ನಡೆಯುತ್ತಿವೆ ಎಂದು ವಿವರ ಕೇಳಿದರು.

ಇದೇ ವೇಳೆ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ನಾಯಕರು, ಕಾಂಗ್ರೆಸ್ ಸರ್ಕಾರಕ್ಕೆ ಯೋಜನೆಗಳನ್ನು ಮುಂದುವರಿಸುವುದು ಕಷ್ಟವಾಗುತ್ತಿದೆ ಎಂದು ವಿವರಿಸಿದ್ದಾರೆ. ಇದಲ್ಲದೆ ಬಸ್ ದರ ಹೆಚ್ಚಳದ ಬಗ್ಗೆಯೂ ಮಾಹಿತಿ ನೀಡಿದರು.

ನಂತರ ನಡ್ಡಾ ಅವರು ವಿಮಾನ ನಿಲ್ದಾಣದಿಂದ ಕೆಕೆ ಗೆಸ್ಟ್ ಹೌಸ್​​ನತ್ತ ಪ್ರಯಾಣ ಬೆಳೆಸಿದರು. ಏರ್​ಪೋರ್ಟ್​ನಿಂದ ತೆರಳುವ ವೇಳೆ ವಿಜಯೇಂದ್ರ ಅವರನ್ನು ನಡ್ಡಾ ತಮ್ಮ ಜೊತೆ ಕಾರಿನಲ್ಲಿ ಕರೆದೊಯ್ದರು. ಇತರ ನಾಯಕರ ಬಳಿ ಶುಕ್ರವಾರ ಮಾತುಕತೆ ನಡೆಸುವುದಾಗಿ ತಿಳಿಸಿದರು ಎಂದು ಮೂಲಗಳು ತಿಳಿಸಿವೆ.

ಈ ವೇಳೆ ವಿವಿಧ ರಾಜ್ಯ ನಾಯಕರು ಪ್ರತ್ಯೇಕವಾಗಿ ನಡ್ಡಾ ಅವರನ್ನು ಭೇಟಿ ಮಾಡಿ, ರಾಜ್ಯ ಘಟಕದಲ್ಲಿನ ಗೊಂದಲಗಳನ್ನು ಬಗೆಹರಿಸುವಂತೆ ಮನವಿ ಮಾಡುವ ಸಾಧ್ಯತೆಗಳಿವೆ. ಇದೀಗ ನಡ್ಡಾ ಅವರು, ರಾಜ್ಯಕ್ಕೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಬಣ ಬಡಿದಾಟಕ್ಕೆ ಬ್ರೇಕ್ ಬೀಳಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments