Select Your Language

Notifications

webdunia
webdunia
webdunia
webdunia

ಜೂ. 21ಕ್ಕೆ ಮೈಸೂರಿಗೆ ಬರ್ತಾರೆ ಪಿಎಂ

Jr. Bartare PM to Mysore for 21st
bangalore , ಭಾನುವಾರ, 22 ಮೇ 2022 (19:46 IST)
ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಈ ಬಾರಿ ದೇಶದ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ಬಗ್ಗೆ ಪ್ರಧಾನಿ ಕಾರ್ಯಾಲಯ ದೃಢಪಡಿಸಿದ್ದು , ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್​​ಗೆ ಪತ್ರ ಬರೆದಿದೆ..ರವಿಕುಮಾರ್​ಗೆ ಬರೆದ ಪತ್ರದಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ PMO ತಿಳಿಸಿದೆ.. ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಆಹ್ವಾನಿಸಿದ್ದಾರೆ..ಇನ್ನು, ಆಯುಷ್ ಸಚಿವಾಲಯವು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಗರದ ರೇಸ್ ಕೋರ್ಸ್ ಆವರಣದಲ್ಲಿ ಭರ್ಜರಿ ಸಿದ್ಧತೆ ಮಾಡಲಾಗ್ತಿದೆ.. ವಿಜಯನಗರದಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ಯೋಗ ದಿನಾಚರಣೆ ಕುರಿತು ಪೋಸ್ಟರ್ ಬಿಡುಗಡೆ ಮಾಡಲಾಯ್ತು.. 2017ರಲ್ಲಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದ್ದ ಮೈಸೂರು, ಮತ್ತೆ ಗಿನ್ನೆಸ್ ದಾಖಲೆ ಸೇರಲು ಸಾಂಸ್ಕೃತಿಕ ನಗರಿಯಲ್ಲಿ ಸಿದ್ಧತೆ ನಡೆದಿದ್ದು, ಈ ಬಾರಿ 2 ಲಕ್ಷ ಯೋಗಪಟುಗಳನ್ನು ಸೇರಿಸುವ ಆಶಯವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ವಿರುದ್ಧ ‘ರಾಗಾ’ ವಾಗ್ದಾಳಿ