ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಧೈರ್ಯದಿಂದ ದೂರು ದಾಖಲಿಸಿದ್ದಾರೆ. ಮಹಿಳಾ ಅಧಿಕಾರಿಗಳ ಜೊತೆ ಕೆ. ಮರಿಗೌಡ ನಡೆದುಕೊಂಡ ವರ್ತನೆ ಸರಿಯೇ. ಹೀಗಾದರೆ ರಾಜ್ಯದಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸುವುದು ಹೇಗೆ ಎಂದು ನ್ಯಾಯಾಧೀಶರಾದ ಬೈರಾರೆಡ್ಡಿ ಅವರು ಕೆ.ಮರಿಗೌಡ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಸಿಎಂ ಆಪ್ತ ಕೆ.ಮರಿಗೌಡ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.
ನಿರೀಕ್ಷಣಾ ಜಾಮೀನನ್ನು ವಜಾಗೊಳಿಸಲು ಕೋರ್ಟ್ ಇಂಗಿತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸಿಎಂ ಆಪ್ತ ಕೆ. ಮರಿಗೌಡ ಪರ ವಕೀಲರು ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.