ಹೃದಯಾಘಾತಕ್ಕೆ ಒಳಗಾದ ನ್ಯಾಯಾಧೀಶರನ್ನು ಝೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ತುಮಕೂರಿಗೆ ಕರೆತಂದು ಚಿಕಿತ್ಸೆ ಒದಗಿಸಿದ ಘಟನೆ ಬುಧವಾರ ನಡೆದಿದೆ.
ನ್ಯಾಯಾಧೀಶ ಸದಾನಂದ ಎಂ ಕಲಾಲ್ ಅವರಿಗೆ ಮಧ್ಯಾಹ್ನ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಶಿವಮೊಗ್ಗದಿಂದ ಬೆಂಗಳೂರಿಗೆ ಆಂಬುಲೆನ್ಸ್ ನಲ್ಲಿ ಬೆಂಗಳೂರಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಯಿತು.
ತುಮಕೂರು ಮಾರ್ಗವಾಗಿ ಬರುತ್ತಿದ್ದಂತೆ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಕೂಡಲೇ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗಿದೆ.
ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದ ನ್ಯಾಯಾಧೀಶ ಕಲಾಲ್ ಅವರಿಗೆ ಮಾರ್ಗಮಧ್ಯೆದಲ್ಲಿ ಕಾರ್ಡಿಯಾಕ್ ಅರೆಸ್ಟ್ ಆಗಿದೆ. ಇದರಿಂದ ಮಠದ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಒದಗಿಸಲಾಗಿದೆ.
ತುಮಕೂರು ಜಿಲ್ಲೆಯ ತಿಪಟೂರು, ಗುಬ್ಬಿ ಹಾಗೂ ತುಮಕೂರು ನಗರದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗುತ್ತಿತ್ತು.
ಪ್ರಸ್ತುತ ಶಿವಮೊಗ್ಗದಲ್ಲಿ ಗ್ರಾಹಕರ ಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಧಾರವಾಡದಲ್ಲಿ ನ್ಯಾಯಾಧೀಶರಾಗಿ ನಿವೃತ್ತಿ ಹೊಂದಿದ್ದರು. ಹಿಂದೆ ಮೂತ್ರಪಿಂಡ ಟ್ರಾನ್ಸ್ಲೇಷನ್ ಚಿಕಿತ್ಸೆ ಕೂಡ ನೀಡಲಾಗಿದೆ.10 ದಿನಗಳ ಹಿಂದಷ್ಟೇ ಅಪಘಾತಕ್ಕೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.