Select Your Language

Notifications

webdunia
webdunia
webdunia
webdunia

ಪಾಕ್ ಜಿಂದಾಬಾದ್ ಎಂದ ಶಿಕ್ಷಕಿಗೆ ನ್ಯಾಯಾಂಗ ಬಂಧನ

ಶಿಕ್ಷಕಿ
ಕಾಶ್ಮೀರದಲ್ಲಿ ದೇಶದ ವೀರಸೈನಿಕರು ಹುತಾತ್ಮರಾದ ಬೆನ್ನಲ್ಲೆ ಪಾಕ್ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು‌ ಪೋಸ್ಟ್ ಹಾಕಿದ್ದ ಖಾಸಗಿ ಶಾಲೆಯ ಶಿಕ್ಷಕಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಬೆಳಗಾವಿ ಜಿಲ್ಲೆಯ ಸವದತ್ತಿ ಕೋರ್ಟ್​ ಆದೇಶ ಹೊರಡಿಸಿದೆ.

ಸವದತ್ತಿ ತಾಲೂಕಿನ ಕಡಬಿ-ಶಿವಾಪುರ ಗ್ರಾಮದ ಶಿಕ್ಷಕಿ ಸಾಮಾಜಿಕ ‌ಜಾಲತಾಣಗಳಲ್ಲಿ ದೇಶದ್ರೋಹದ ಪೋಸ್ಟ್ ಹಾಕಿದ್ದಳು. ಪ್ರಕರಣ ಸಂಬಂಧ ‌ಮುರಗೋಡ ಠಾಣೆಯ ಪೊಲೀಸರು ಶಿಕ್ಷಕಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು.

ಪೊಲೀಸರ ವಿಚಾರಣೆ ವೇಳೆ ಶಿಕ್ಷಕಿ ಪೋಸ್ಟ್ ಹಾಕಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು‌ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶಿಕ್ಷಕಿ ವಿರುದ್ಧ ಕಠಿಣ ‌ಕ್ರಮ ಕೈಗೊಳ್ಳಬೇಕು ಎಂದು‌ ಮುರಗೋಡ ಹೋಬಳಿಯ ಮೂರು ಗ್ರಾಮಗಳಲ್ಲಿ ಪ್ರತಿಭಟನೆ ನಡೆದಿದ್ದವು. ಆಕ್ರೋಶಗೊಂಡ ಗ್ರಾಮಸ್ಥರು ಶಿಕ್ಷಕಿಯ ಮನೆಗೆ ಬೆಂಕಿ ಹಚ್ಚಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಮನೆಮಂದಿ ಶುಭಕಾರ್ಯಕ್ಕೆ ತೆರಳಿದ್ರು; ಆ ಯುವಕ ಯಮಲೋಕ ಸೇರಿದ!