Select Your Language

Notifications

webdunia
webdunia
webdunia
webdunia

ಬಿಗ್‌ಬಾಸ್‌ ಮನೆಗೆ ಬೀಗ ಹಾಕಿದ ಹಾಗೇ, ಪಿಕ್‌ಪಾಕೆಟ್ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ

BigBoss Season 12

Sampriya

ಬೆಂಗಳೂರು , ಬುಧವಾರ, 8 ಅಕ್ಟೋಬರ್ 2025 (16:50 IST)
ಬೆಂಗಳೂರು: ನಿಯಮಗಳ ಉಲ್ಲಂಘನೆ ನೆಪದಲ್ಲಿ ಬಿಡದಿಯ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಿದ್ದೀರಿ. ಒಪ್ಪಿಕೊಳ್ಳೋಣ. ‌ಅದೇ ರೀತಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಜೆಡಿಎಸ್ ಪ್ರಶ್ನೆ ಮಾಡಿದೆ.  

ಈ ಸಂಬಂಧ ಜೆಡಿಎಸ್ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದೆ. ನಿಯಮಗಳ ಉಲ್ಲಂಘನೆ ನೆಪದಲ್ಲಿ ಬಿಡದಿಯ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಿದ್ದೀರಿ. ಒಪ್ಪಿಕೊಳ್ಳೋಣ. ‌

ಅದೇ ರೀತಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್    ಮಾಡಿಸುತ್ತೀರಾ ಸಿಎಂ ಸಿದ್ದರಾಮಯ್ಯ
, ಡಿಸಿಎಂ ಡಿಕೆ ಶಿವಕುಮಾರ್‌ ಅವರೇ..


ರಾಜ್ಯದಲ್ಲಿ  ನಿರಂತರವಾಗಿ ನಡೆಯುತ್ತಿರುವ ರೈತರ
ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ? 

ರಾಜ್ಯದ ಜನರ ಮೇಲೆ ನಿರಂತರವಾಗಿ ತೆರಿಗೆ ಬರೆ ಎಳೆದು ಲೂಟಿ ಹೊಡೆಯುತ್ತಿರುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ?  

ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ?

ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯನ್ನು  ತಡೆಯಲು ಯಾವ ರೀತಿ ಬೀಗ ಹಾಕಿಸುತ್ತೀರಾ? 

ರಾಜ್ಯದ ಜನರ ತೆರಿಗೆ ಹಣವನ್ನು ಅಕ್ರಮವಾಗಿ ವಾಮಮಾರ್ಗಗಳ ಮೂಲಕ @INCIndia
 ಹೈಕಮಾಂಡ್'ಗೆ ಕಪ್ಪ ಒಪ್ಪಿಸುತ್ತಿರುವುದಕ್ಕೆ ಯಾವಾಗ ಬೀಗ ಹಾಕಿಸುತ್ತೀರಾ? 

@INCKarnataka
 ಸರ್ಕಾರದ 60%  ಕಮಿಷನ್ ದಂಧೆಗೆ ಯಾವಾಗ ಬೀಗ ಹಾಕುತ್ತೀರಾ?

ಕಾಂಗ್ರೆಸ್ ಶಾಸಕರು ಮತ್ತು ಕಾಂಗ್ರೆಸ್ ಪುಢಾರಿಗಳು ನಡೆಸುತ್ತಿರುವ ಕ್ಯಾಸಿನೋ ದಂಧೆ, ಅಕ್ರಮಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ?

ಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ?

ಕೈಲಾಗದವರು ಮೈಪರಚಿ ಕೊಂಡಂತೆ ಇದೆ ಕಾಂಗ್ರೆಸ್ ಸರ್ಕಾರದ ದುರಾಡಳಿತ.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕೃತ ಸಂವಹನಕ್ಕಾಗಿ zohoಮೇಲ್‌ಗೆ ಬದಲಾಯಿಸಿಕೊಂಡ ಅಮಿತ್‌ ಶಾ