7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ರು. ಈ ಮುಷ್ಕರಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೂಡ ಬೆಂಬಲ ನೀಡಿದ್ದು, ರಾಜ್ಯದ ಹಲವೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಬಂದ್ ಮಾಡಲಾಗಿತ್ತು. ಸದ್ಯ ಇದರಿಂದ ರೋಗಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಬೆಂಗಳೂರಿನ ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್ ಹಿನ್ನೆಲೆ ಭಾರೀ ಸಮಸ್ಯೆಗಳು ಎದುರಾಗಿತ್ತು. ಚಿಕಿತ್ಸೆ ಸಿಗದೆ ರೋಗಿಗಳು ನರಳಾಡಿದ್ರು. ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಗರ್ಭಿಣಿ ಪರದಾಡುವಂತಹ ಪರಿಸ್ಥತಿ ಉಂಟಾಗಿತ್ತು. ಮೂರು ಆಸ್ಪತ್ರೆಗಳಿಗೆ ಹೋದರೂ ಗರ್ಭಿಣಿಗೆ ಚಿಕಿತ್ಸೆ ಸಿಕ್ಕಿಲ್ಲ. ವೈದ್ಯರಿಲ್ಲ ಅಂತಾ ಚಿಕಿತ್ಸೆ ಕೊಡದೆ ನಮ್ಮನ್ನು ಕಳಿಸುತ್ತಿದ್ದಾರೆ ಎಂದು ಗರ್ಭಿಣಿಯ ಮಹಿಳೆಯ ತಾಯಿ ಕಣ್ಣೀರು ಹಾಕಿ ತಮ್ಮ ಅಳಲು ತೋಡಿಕೊಂಡಿದ್ರು.