Select Your Language

Notifications

webdunia
webdunia
webdunia
webdunia

ಸೆ.26 ರಂದು ಸಚಿವ ಕೆ.ಜೆ.ಜಾರ್ಜ್ ಸಚಿವ ಸಂಪುಟಕ್ಕೆ ಸೇರ್ಪಡೆ

ಸೆ.26 ರಂದು ಸಚಿವ ಕೆ.ಜೆ.ಜಾರ್ಜ್ ಸಚಿವ ಸಂಪುಟಕ್ಕೆ ಸೇರ್ಪಡೆ
ಬೆಂಗಳೂರು , ಶನಿವಾರ, 24 ಸೆಪ್ಟಂಬರ್ 2016 (12:07 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ.ಜಾರ್ಜ್, ಸೆಪ್ಟೆಂಬರ್ 26 ರಂದು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ.
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಶರಣಾಗುವ ಮುನ್ನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರಣವ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ಅವರು ತನಗೆ ಕಿರುಕುಳ ನೀಡತ್ತಿದ್ದಾರೆ. ನನಗೆನಾದ್ರೂ ಆದ್ರೆ ಈ ಮೂವರೇ ಕಾರಣ ಎಂದು ಆರೋಪಿಸಿದ್ದರು.
 
ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅನ್ನಪೂರ್ಣೇಶ್ವರಿ ಅವರು ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರೊನಬ್ ಮೊಹಂತಿ ಮತ್ತು ಎಂ.ಎಂ.ಪ್ರಸಾದ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಡಿಕೇರಿ ಟೌನ್‌ ಪೊಲೀಸರಿಗೆ ಸೂಚನೆ ನೀಡಿದ್ದರು.
 
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತುರ್ತು ಸಭೆ ಕರೆದಿದ್ದು, ಸಚಿವ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿ ಕಛೇರಿಗೆ ತೆರಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 
 
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಐಪಿಎಸ್ ಅಧಿಕಾರಿಗಳಾದ ಪ್ರೊನವ್ ಮೊಹಾಂತಿ ಹಾಗೂ ಎಂ.ಎಂ.ಪ್ರಸಾದ್ ಅವರ ಪಾತ್ರವಿರುವ ಕುರಿತು ಯಾವುದೇ ಸಾಕ್ಷಾಧಾರಗಳಿಲ್ಲ ಎಂದು ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಸಿದ್ದರು. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಂಡ್ಯದಲ್ಲಿ ಶಾಲಾ- ಕಾಲೇಜು ಪುನರಾರಂಭ