ಕೆ. ಎನ್. ರಾಜಣ್ಣ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ

Webdunia
ಸೋಮವಾರ, 4 ಜುಲೈ 2022 (14:20 IST)
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ, ಕೆ ಎನ್ ರಾಜಣ್ಣ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ' ರಾಜಣ್ಣ ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಕ್ಷಮೆ ಕೇಳಬೇಕು ಎಂದು ನಾನು ಹಾಗೂ ಪಕ್ಷದ ವರಿಷ್ಠರು ಸೂಚಿಸಿದರು. ಅವರು ಕೂಡ ಗೌರವಯುತವಾಗಿ ಕ್ಷಮೆ ಕೇಳಿದ್ದಾರೆ. ಈ ವಿಚಾರ ಇಲ್ಲಿಗೆ ಬಿಡೋಣ. ನಮ್ಮನ್ನು ಒಂದಲ್ಲಾ ಒಂದು ದಿನ ಹೊತ್ತುಕೊಂಡು ಹೋಗಬೇಕು. ಇದೇ ಪ್ರಕೃತಿ ನಿಯಮ ' ಎಂದು ಉತ್ತರಿಸಿದರು.
 
ರಾಹುಲ್ ಗಾಂಧಿ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ' ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ನಾಯಕರು ಸೇರಿದಂತೆ ಎಲ್ಲರೂ ಮಾತನಾಡುತ್ತಿದ್ದಾರೆ. ಈ ಅವಕಾಶವನ್ನು ನಾವು ಬಳಸಿಕೊಳ್ಳಬೇಕು. ಪಕ್ಷದ ವತಿಯಿಂದ ನಾವು ಪ್ರತ್ಯೇಕ ಸಮೀಕ್ಷೆ ನಡೆಸಿದ್ದು, ವರದಿ ಪಕ್ಷದ ಪರವಾಗಿದೆ. ಸಮೀಕ್ಷೆ ಪಕ್ಕಕ್ಕಿಟ್ಟರೂ ಇತ್ತೀಚೆಗೆ ನಡೆದ ಉಪ ಚುನಾವಣೆಗಳಲ್ಲಿ ಬಿಜೆಪಿಯವರು ಎಷ್ಟು ಗೆದ್ದಿದ್ದಾರೋ ನಾವು ಅಷ್ಟೇ ಗೆದ್ದಿದ್ದೇವೆ. ಪರಿಷತ್ ಚುನಾವಣೆಯಲ್ಲೂ ಪಕ್ಷ ಉತ್ತಮ ಸಾಧನೆ ಮಾಡಿದೆ. ನಮ್ಮ ಸರ್ಕಾರ ಇದ್ದಾಗ ಮಂಡ್ಯ, ತುಮಕೂರಿನಲ್ಲಿ ಪಕ್ಷ ಸೋತಿತ್ತು. ಈ ಬಾರಿ ಗೆದ್ದಿದ್ದೇವೆ. ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ನಾವು ಗೆದ್ದಿರಲಿಲ್ಲ. ಈಗ ಗೆದ್ದಿದ್ದೇವೆ. ಚುನಾಯಿತ ಪ್ರತಿನಿಧಿಗಳು ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದರು. ಈಗ ವಿದ್ಯಾವಂತರು, ಶಿಕ್ಷಕರು ಹಾಗೂ ಪ್ರಜ್ಞಾವಂತರು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಇದು ಜನರ ಅಭಿಪ್ರಾಯ ಏನು ಎಂಬುದನ್ನು ತಿಳಿಸುತ್ತಿದೆ. ಎಲ್ಲರೂ ಉತ್ತಮ ಆಡಳಿತಕ್ಕೆ ಕಾಂಗ್ರೆಸ್ ಬರಬೇಕು ಎಂದು ಬಯಸುತ್ತಿದ್ದಾರೆ' ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments