Select Your Language

Notifications

webdunia
webdunia
webdunia
webdunia

ಕೆ.ಪಿ.ಟಿ. ಸಿ.ಎಲ್ ನೌಕರರಿಗೆ ಶೇ 20 ರಷ್ಟು ವೇತನ ಪರಿಷ್ಕರಣೆ : ಸಿಎಂ ಬೊಮ್ಮಾಯಿ

ಕೆ.ಪಿ.ಟಿ. ಸಿ.ಎಲ್ ನೌಕರರಿಗೆ ಶೇ 20 ರಷ್ಟು   ವೇತನ ಪರಿಷ್ಕರಣೆ : ಸಿಎಂ ಬೊಮ್ಮಾಯಿ
bangalore , ಗುರುವಾರ, 16 ಮಾರ್ಚ್ 2023 (18:49 IST)
ಸಾರಿಗೆ ಇಲಾಖೆಯ ನೌಕರರಿಗೆ  ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ನೌಕರರಿಗೆ ಶೇ. 15ರಷ್ಟು ವೇತನ ಹೆಚ್ಚಳ ಮಾಡಿ ಇಂದು ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೆಪಿಟಿಸಿಎಲ್ ಹಾಗೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಕೆಪಿಟಿಸಿಎಲ್ ನೌಕರರ ವೇತನ ಶೇ. 20 ರಷ್ಟು ಹೆಚ್ಚಳ ಮಾಡುತ್ತೇವೆ. ಸಾರಿಗೆ ನೌಕರರ ವೇತನ ಶೇ. 15 ರಷ್ಟು ಹೆಚ್ಚಳ ಮಾಡಿ ಇಂದೇ ಅಧಿಕೃತವಾಗಿ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ....ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರ ಒಕ್ಕೂಟವು ಇದೇ ಮಾರ್ಚ್ 21 ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಇದೀಗ ಸಾರಿಗೆ ನೌಕರರಿಗೆ ಶೇ. 15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಪಾರ್ಟಿಗೆ ಅಂತಾ ಕರೆಸಿ ತಮನ್ನಾ ಕೊಲೆ