Webdunia - Bharat's app for daily news and videos

Install App

ಭಿನ್ನಮತ: ಯಡಿಯೂರಪ್ಪ ಕಾರ್ಯವೈಖರಿ ಬಗ್ಗೆ ದೂರು ಸಲ್ಲಿಸಿದ ಬಿಜೆಪಿ ನಾಯಕರು

Webdunia
ಭಾನುವಾರ, 3 ಜುಲೈ 2016 (11:05 IST)
ಬಿಜೆಪಿ ಪದಾಧಿಕಾರಿಗಳ ನೇಮಕಕ್ಕೆ ಅಸಮಾಧಾನ ಹಿನ್ನೆಲೆ  ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್ ಅವರನನ್ನು   ರಾಜ್ಯ ಬಿಜೆಪಿ ನಾಯಕರು ಭೇಟಿಯಾಗಿದ್ದಾರೆ. ದೆಹಲಿಯ ರಾಮಲಾಲ್ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಲಾಗಿದ್ದು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ಬಿಜೆಪಿ ನಾಯಕರು ದೂರು ಸಲ್ಲಿಸಿದ್ದಾರೆ.


ಪರಿಷತ್ ಪ್ರತಿಪಕ್ಷ ನಾಯಕ ಈಶ್ವರಪ್ಪ, ಪ್ರಹ್ಲಾದ್ ಜೋಷಿ. ನಿರ್ಮಲ ಕುಮಾರ್ ಸುರಾನಾ  ಸಿ.ಟಿ ರವಿ, ಭಾನು ಪ್ರಕಾಶ, ಶಿವಯೋಗಿಸ್ವಾಮಿಯವರಿಂದ ಮೊದಲಾದವರು ರಾಮಲಾಲ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. 
 
ಪದಾಧಿಕಾರಿಗಳ ನೇಮಕವನ್ನು ಯಾವುದೇ ಕಾರಣಕ್ಕು ಪರಿಷ್ಕರಿಸುವುದಿಲ್ಲ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಯಿಂದ ಆಕ್ರೋಶಗೊಂಡಿರುವ ಬಿಜೆಪಿ ಹಿರಿಯ ಕೆ.ಎಸ್.ಈಶ್ವರಪ್ಪ ಮತ್ತು ಅವರ ಬೆಂಬಲಿಗರು ಭೇಟಿಯಾಗಿದ್ದಾರೆ.
 
ಪದಾಧಿಕಾರಿಗಳ ನೇಮಕದಲ್ಲಿ ಗೊಂದಲಗಳಾಗಿದ್ದರಿಂದ ಪಟ್ಟಿಯನ್ನು ರದ್ದುಗೊಳಿಸಿ, ಕೋರ್ ಕಮಿಟಿಯಲ್ಲಿ ಚರ್ಚಿಸಿದ ನಂತರ ಪದಾಧಿಕಾರಿಗಳ ನೇಮಕಕ್ಕೆ ಚಾಲನೆ ನೀಡಿ ಎಂದು ಈಶ್ವರಪ್ಪ ಬಣ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರಿಗೆ ಮನವಿ ಮಾಡಿತ್ತು.
 
ಯಡಿಯೂರಪ್ಪ ಬೆಂಗಳೂರಲ್ಲಿ ಕುಳಿತು ರಾಜ್ಯದ 30 ಜಿಲ್ಲೆಗಳ ಪದಾಧಿಕಾರಿಗಳ ನೇಮಕ ಮಾಡಿದ್ದಾರೆ. ಆಯಾ ಜಿಲ್ಲೆಗಳಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸದೆ ನಿರ್ಧಾರ ತೆಗೆದುಕೊಂಡಿರುವುದು ಬಿಜೆಪಿಗೆ ನೀತಿಗೆ ಒಪ್ಪುವುದಿಲ್ಲ ಎಂದು ಈಶ್ವರಪ್ಪ ಗುಡುಗಿದ್ದರು.
 
ಸಾವಿರಾರು ಕಾರ್ಯಕರ್ತರು ತಮ್ಮ ನೋವನ್ನು ನನ್ನೊಂದಿಗೆ ಹಂಚಿಕೊಂಡಿದ್ದಾರೆ. ಹಲವು ವರ್ಷಗಳಿಂದ ಪಕ್ಷದಲ್ಲಿ ದುಡಿದವರಿಗೆ ಸ್ಥಾನ ನಿರಾಕರಿಸಲಾಗಿದೆ. ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಹಿಂಬಾಲಕರಿಗೆ ಮಾತ್ರ ಸ್ಥಾನ ನೀಡಲಾಗಿದೆ. ಕರಂದ್ಲಾಜೆ ಮಾತು ಕೇಳಿ ಯಡಿಯೂರಪ್ಪ ಪದಾಧಿಕಾರಿಗಳ ನೇಮಕ ಮಾಡಿದ್ದಾರೆ ಎಂದು ಈಶ್ವರಪ್ಪ ಬಣ ಆರೋಪಿಸಿದೆ.
 
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪದಾಧಿಕಾರಿಗಳ ನೇಮಕ ರದ್ದುಗೊಳಿಸುವುದಿಲ್ಲ ಎಂದು ತಿಳಿದ ಕೆ.ಎಸ್.ಈಶ್ವರಪ್ಪ ಮತ್ತು ಅವರ ಬೆಂಬಲಿಗರು ದೆಹಲಿಗೆ ತೆರಳಿ ಪಕ್ಷದ ವರಿಷ್ಠರ ಮುಂದೆ ಯಡಿಯೂರಪ್ಪನವರ ಸರ್ವಾಧಿಕಾರಿ ಧೋರಣೆ ವಿರುದ್ಧ ದೂರು ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ಹಣ ವರ್ಗಾವಣೆ: ಹಲವೆಡೆ ಇಡಿ ದಾಳಿ

ಅಬ್ಬಾ ಈ ವಿಡಿಯೋ ನೋಡಿದ್ರೆ ಎದೆ ಝಲ್ ಎನಿಸುತ್ತದೆ: ಚಿರತೆ ಜತೆ ವ್ಯಕ್ತಿಯ ಒಂಟಿ ಹೋರಾಟ

ಹಲವು ದೂರುಗಳ ಬೆನ್ನಲ್ಲೇ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಮೋದಿ ಸರ್ಕಾರದಿಂದ ಅಘೋಷಿತ ತುರ್ತು ಪರಿಸ್ಥಿತಿ ಎಂದ ಜೈರಾಂ ರಮೇಶ್: ನೀವ್ಯಾಕೆ ಅರೆಸ್ಟ್ ಆಗಿಲ್ಲ ಎಂದು ಪಬ್ಲಿಕ್

ಅಭಿನಂದನ್ ವರ್ಧಮಾನ್‌ರನ್ನು ಸೆರೆಹಿಡಿದಿದ್ದ ಪಾಕ್‌ ಅಧಿಕಾರಿ ತಾಲಿಬಾನ್‌ ಘರ್ಷಣೆಯಲ್ಲಿ ಸಾವು

ಮುಂದಿನ ಸುದ್ದಿ
Show comments