Select Your Language

Notifications

webdunia
webdunia
webdunia
webdunia

ಯಡಿಯೂರಪ್ಪಗೆ ಟಾಂಗ್ ನೀಡಲು ಕೆ.ಎಸ್.ಈಶ್ವರಪ್ಪ ಸಿದ್ದತೆ

ಯಡಿಯೂರಪ್ಪಗೆ ಟಾಂಗ್ ನೀಡಲು ಕೆ.ಎಸ್.ಈಶ್ವರಪ್ಪ ಸಿದ್ದತೆ
ಬೆಂಗಳೂರು , ಶುಕ್ರವಾರ, 1 ಜುಲೈ 2016 (12:50 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಾಳೆ ಬಿಜೆಪಿ ಪದಾಧಿಕಾರಿಗಳ ಸಭೆ ಕರೆದಿದ್ದು, ಸಭೆಗೆ ಹಾಜರಾಗಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಕೆ,ಎಸ್.ಈಶ್ವರಪ್ಪ ತಮ್ಮ ನಿವಾಸದಲ್ಲಿ ಮಹತ್ವದ ಸಭೆ ಕರೆದಿದ್ದಾರೆ.
 
ಪದಾಧಿಕಾರಿಗಳ ನೇಮಕದಲ್ಲಿ ಯಡಿಯೂರಪ್ಪ ಪಕ್ಷದ ಮುಖಂಡರ ನಿಲುವು ಆಲಿಸದೆ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ತಾರತಮ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
 
ದೆಹಲಿ ವರಿಷ್ಠರು ಸಮಯ ನಿಗದಿಪಡಿಸಿಲ್ಲ. ಒಂದು ವೇಳೆ ಸಮಯ ನಿಗದಿಯಾದಲ್ಲಿ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಪದಾಧಿಕಾರಿಗಳ ಪಟ್ಟಿ ಪರಿಷ್ಕರಿಸುವುದಿಲ್ಲ ಎಂದು ಯಡಿಯೂರಪ್ಪ ಗುಡುಗಿದ್ದಾರೆ ಎನ್ನಲಾಗಿದೆ.
 
ಈಶ್ವರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಉಪಾಧ್ಯಕ್ಷ ಭಾನುಪ್ರಕಾಶ್, ಶಾಸಕರಾದ ಸಿ.ಟಿ ರವಿ, ಸುನೀಲ್ ಕುಮಾರ್ ನಿರ್ಮಲಾ ಸುರಾನಾ ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸೆನ್ಸೆಕ್ಸ್: ಐದನೇ ದಿನವೂ ಭರ್ಜರಿ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ