Publish Date: Fri, 18 Aug 2017 (13:43 IST)
Updated Date: Fri, 18 Aug 2017 (13:45 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಾಕಷ್ಟು ಕಳ್ಳಬೆಕ್ಕುಗಳಿವೆ. ಕಳ್ಳರ ಕಳ್ಳ ಸಿಎಂ ಸಿದ್ದರಾಮಯ್ಯ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರಕಾರದ ವಿರುದ್ಧ ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ಕೂಡಲೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು,
ಕಳಂಕಿತ ಸಚಿವರ ರಾಜೀನಾಮೆ ಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಘೋಷಿಸಿದ ಅವರು, ಯಡಿಯೂರಪ್ಪ ಮೇಲೆ ಕೇಸ್ ದಾಖಲಿಸಿ ಸಿಎಂ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ಸರಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಸಮರ ಸಾರಲಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.