Select Your Language

Notifications

webdunia
webdunia
webdunia
webdunia

ಯಡಿಯೂರಪ್ಪಗೆ ಸೆಡ್ಡು ಹೊಡೆದ ಕೆ.ಎಸ್‌.ಈಶ್ವರಪ್ಪ

ಯಡಿಯೂರಪ್ಪಗೆ ಸೆಡ್ಡು ಹೊಡೆದ ಕೆ.ಎಸ್‌.ಈಶ್ವರಪ್ಪ
ಬೆಂಗಳೂರು , ಗುರುವಾರ, 18 ಆಗಸ್ಟ್ 2016 (10:16 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಸೆಡ್ಡು ಹೊಡೆದಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, 'ಹಿಂದ' ಸಭೆ ನಡೆಸಲು ಮುಂದಾಗಿದ್ದಾರೆ.
 
ಬಿ.ಎಸ್.ಯಡಿಯೂರಪ್ಪನವರ ವಿರೋಧದ ಮಧ್ಯಯೇ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಇಂದು ಮುಂಜಾನೆ 11 ಗಂಟೆಗೆ ಶಾಸಕರ ಭವನದಲ್ಲಿ 'ಹಿಂದ' ಸಭೆ ನಡೆಯಲಿದೆ.
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
 
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ .

Share this Story:

Follow Webdunia kannada

ಮುಂದಿನ ಸುದ್ದಿ

ಕೂಡ್ಲಿಗಿ ಬಳಿ ಭೀಕರ ರಸ್ತೆ ಅಪಘಾತ: ನಾಲ್ವರ ಸಾವು