ರಾಜ್ಯದ ಆಯ್ದ ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ 30ರಂದು ಕೆ-ಸೆಟ್ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕೆ-ಸೆಟ್ ಪರೀಕ್ಷೆಯು 2018ರ ಡಿಸೆಂಬರ್ 30ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಆಯ್ದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಅಕ್ರಮ ಮತ್ತು ನಕಲು ಅವ್ಯವಹಾರ ತಡೆಯಲು ಹಾಗೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್ ಪ್ರದೇಶದಲ್ಲಿ 1973ರ ಸಿಆರ್.ಪಿ.ಸಿ. ಕಾಯ್ದೆಯ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲು ಇರುವ ಜಿರಾಕ್ಸ್, ಪುಸ್ತಕ ಮಳಿಗೆಗಳನ್ನು ಮುಚ್ಚುವುದರೊಂದಿಗೆ ಮೆರವಣಿಗೆ ಹಾಗೂ ಧರಣಿವನ್ನು ನಡೆಸಬಾರದೆಂದು ಆದೇಶ ಹೊರಡಿಸಲಾಗಿದೆ.
ಪರೀಕ್ಷಾ ಕೋಣೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮೊಬೈಲ್ ಫೋನ್, ಇತರೆ ಚಿಕ್ಕಗಾತ್ರದ ಎಲೆಕ್ಟ್ರಾನಿಕ್ಸ್ ವಸ್ತು ಹಾಗೂ ಇತರೆ ಚಿಕ್ಕ ಗಾತ್ರದ ಪುಸ್ತಕಗಳನ್ನು ಸೇರಿದಂತೆ ಮತ್ತಿತರ ಯಾವುದೇ ವಸ್ತುಗಳನ್ನು ತರಕೂಡದು ಎಂದು ಆದೇಶದಲ್ಲಿ ತಿಳಿಸಲಾಗಿದೆ.