Webdunia - Bharat's app for daily news and videos

Install App

ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣದಲ್ಲಿ ಬಿಜೆಪಿ ಶಾಸಕ..?

Webdunia
ಗುರುವಾರ, 9 ಫೆಬ್ರವರಿ 2017 (09:41 IST)
ಬೆಂಗಳೂರು: ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣದಲ್ಲಿ ದಿನಕ್ಕೊಂದು ದೊಡ್ಡ ಹೆಸರುಗಳು ಕೇಳಿಬರುತ್ತಿವೆ. ಇದೀಗ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಕೊರಳಿಗೆ ಉರುಳಾಗುವ ಸಾಧ್ಯತೆಗಳು ಗೋಚರಿಸುತ್ತಿವೆ.

 
ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ವಿಶ್ವನಾಥ್ ಆಪ್ತ ಸಹಾಯಕ ಸತೀಶ್ ನನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಶಾಸಕರನ್ನೂ ವಿಚಾರಣೆಗೊಳಪಡಿಸಲು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನೇತೃತ್ವದ ತಂಡ ಯೋಜನೆ ರೂಪಿಸಿದೆ.

ಇದರ ಬೆನ್ನಲ್ಲೇ ವಿಶ್ವನಾಥ್ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಅಗ್ನಿ ಶ್ರೀಧರ್ ಹಾಗೂ ಅವರ ಸಹಾಯಕರನ್ನು ವಿಚಾರಣೆಗೊಳಪಡಿಸಲಾಗುತ್ತಿದೆ. ಸದ್ಯಕ್ಕೆ ಅಗ್ನಿ ಶ್ರೀಧರ್ ಎದೆ ನೋವಿನಿಂದಾಗಿ ಆಸ್ಪತ್ರೆಯಲ್ಲಿದ್ದರೆ,  ಅವರ ಸಹಚರರಾದ ಒಂಟೆ ರೋಹಿತ್, ಸೈಲಂಟ್ ಸುನೀಲ ಎಂಬವರನ್ನು 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ವಿಧಾನಸಭೆಯಲ್ಲಿ ಪ್ರತಿಕ್ರಿಯೆ: ಕಡಬಗೆರೆ ಸೀನನ ಮೇಲಿನ ಶೂಟೌಟ್`ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಇಂತಹ ಘಟನೆ ನಡೆದಿದ್ದು, ದುರದೃಷ್ಟಕರ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದೇವೇಳೆ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಗೃಹ ಸಚಿವ ಪರಮೇಶ್ವರ್`ಗೆ ಮನವಿ ಮಾಡಿರುವುದಾಗಿ ವಿಶ್ವನಾಥ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments