Publish Date: Tue, 18 Apr 2023 (18:30 IST)
Updated Date: Tue, 18 Apr 2023 (18:59 IST)
ದಿನೇದಿನೇ ಕರುನಾಡಿನಲ್ಲಿ ಚುನಾವಣಾ ಕಣ ರಂಗೇರುತ್ತಿದ್ದು, ಮೈಸೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಭಾಗಿಯಾಗಿಲಿದ್ದು, ವಿರೋಧಿ ಬಣ ಭೇದಿಸಲು ಸಿದ್ದರಾಮಯ್ಯ ಇಂದು ದಿನಪೂರ್ತಿ ತಲ್ಲೀನರಾಗಲಿದ್ದಾರೆ. ಇಂದು ರಾತ್ರಿ ಮೈಸೂರಿನಲ್ಲೇ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದು, ನಾಳೆ ವರುಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಬೆಳಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಈಗಾಗಲೇ ಬಿಜೆಪಿ ಅಭ್ಯರ್ಥಿ ಸೋಮಣ್ಣ ವರುಣಾ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದು, ಕಳೆದ ಬಾರಿಯಂತೆ ಬಿಜೆಪಿ ಹಾಗೂ ವಿರೋಧಿಗಳಿಂದ ಸಿದ್ದರಾಮಯ್ಯರನ್ನ ಸೋಲಿಸುವ ರಣತಂತ್ರ ನಡೆಸುತ್ತಿದ್ದಾರೆ. ಕಳೆದ ಬಾರಿಯ ಚಾಮುಂಡೇಶ್ವರಿ ಕ್ಷೇತ್ರದ ಸೋಲು ಮರುಕಳಿಸದಂತೆ ಸಿದ್ದರಾಮಯ್ಯ ಅಲರ್ಟ್ ಆಗಿದ್ದಾರೆ.