Publish Date: Sat, 10 Feb 2024 (18:04 IST)
Updated Date: Sat, 10 Feb 2024 (18:09 IST)
ಬೆಂಗಳೂರು : ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಅವರನ್ನು ಗುಂಡಿಟ್ಟು ಕೊಲ್ಲುವಂತಹ ಕಾನೂನು ಜಾರಿಯಾಗಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಸಚಿವ ಕೆ.ಎಸ್ . ಈಶ್ವರಪ್ಪ ಅವರ ಮನೆಗೆ ಕೈ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ದಾವಣಗೆರೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಈಶ್ವರಪ್ಪ ಈ ಹೇಳಿಕೆ ನೀಡಿದ್ದರು. ಈಶ್ವರಪ್ಪ ವಿರುದ್ದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಫೆ. 15 ರಂದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿ ಮಾಡಿಲಾಗಿದೆ.
ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಿ ಕಾನೂನು ರೀತ್ಯಾ ಅವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಕೈ ಕಾರ್ಯಕರ್ತರು ಆಗ್ರಹಿಸಿಕೆ.ಎಸ್. ಈಶ್ವರಪ್ಪ ವಿರುದ್ದ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಶಶಾಂಕ್ ಎಂಬುವವರೂ ಸಹ ಶುಕ್ರವಾರ ದೂರು ದಾಖಲಿಸಿದ್ದರು.