Select Your Language

Notifications

webdunia
webdunia
webdunia
webdunia

‘ಕೈ’ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್​?

‘ಕೈ’ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್​?
bangalore , ಶುಕ್ರವಾರ, 17 ಮಾರ್ಚ್ 2023 (21:19 IST)
ಚುನಾವಣೆ ಸನಿಹದಲ್ಲಿ ಟಿಕೆಟ್ ಪಾಲಿಟಿಕ್ಸ್ ಜೋರಾಗಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಪ್ರಕಟಿಸುವ ಸಾಧ್ಯತೆಯಿದೆ. ಕಳೆದ ವಾರ ಬೆಂಗಳೂರಿನ ಹೋಟೆಲ್‌ನಲ್ಲಿ ಸ್ಕ್ರೀನಿಂಗ್ ಕಮಿಟಿ ಸದಸ್ಯರು, ವಿಪಕ್ಷ ನಾಯಕ ಸಿದ್ದರಾಮಯ್ಯ , KPCC ಅಧ್ಯಕ್ಷ D.K. ಶಿವಕುಮಾರ್​​​ ಜೊತೆಗೂಡಿ 170 ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಅಖೈರು ಮಾಡಿ ದೆಹಲಿಗೆ ಕಳಿಸಿಕೊಟ್ಟಿದ್ದರು. ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಜೊತೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸರಣಿ ಸಭೆ ನಡೆಸಿ ಮೊದಲ ಪಟ್ಟಿಯನ್ನು ಫೈನಲ್ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಕ್ಷೇತ್ರಗಳಿಗೆ ಒಬ್ಬ ಅಭ್ಯರ್ಥಿಯ ಹೆಸರು ಪಕ್ಕಾ ಮಾಡಲಾಗಿದೆ. ತೀವ್ರ ಸ್ಪರ್ಧೆ ಇರುವ ಕ್ಷೇತ್ರಗಳಿಗೆ ಎರಡೆರೆಡು ಹೆಸರನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಮೂಲಗಳ ಪ್ರಕಾರ ಮೂರ್ನಾಲ್ಕು ಶಾಸಕರನ್ನು ಹೊರತುಪಡಿಸಿ ಉಳಿದಂತೆ ಬಹುತೇಕ ಶಾಸಕರಿಗೆ ಮತ್ತೆ ಟಿಕೆಟ್ ಸಿಗಲಿದೆ. ಮೊದಲ ಹಂತದಲ್ಲಿ 150 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲರನ್ನು MLA ಮಾಡಕಾಗಲ್ಲ- ಡಿಕೆಶಿ