Select Your Language

Notifications

webdunia
webdunia
webdunia
webdunia

ಸರ್ಕಾರದ ವಿರುದ್ಧ ಕೈ ಬೃಹತ್​​​ ಹೋರಾಟ

ಸರ್ಕಾರದ ವಿರುದ್ಧ ಕೈ ಬೃಹತ್​​​ ಹೋರಾಟ
bangalore , ಶನಿವಾರ, 19 ನವೆಂಬರ್ 2022 (17:36 IST)
ಬೆಂಗಳೂರಿನ ಮತದಾರರ ಮಾಹಿತಿಯನ್ನು ಚಿಲುಮೆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿದೆ ಎಂದು ಆರೋಪಿಸಿದ ಕಾಂಗ್ರೆಸ್​​​​​​ BBMP ಮತ್ತು ಸರ್ಕಾರದ ಆಕ್ರೋಶದ ಜ್ವಾಲೆ ಹೊರಹಾಕಿದೆ. ಸರ್ಕಾರದ ವಿರುದ್ಧ ರಣಕಹಳೆಯನ್ನೇ ಮೊಳಗಿಸಿದೆ. ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಪೊಲೀಸರು ದಾಳಿ ನಡೆಸಿ ಕೆಲ ದಾಖಲೆ ವಶಪಡಿಸಿಕೊಂಡಿದ್ದಾರೆ. ಅಲ್ಲಿ ನೋಟು ಎಣಿಕೆ ಯಂತ್ರಗಳು ಲಭ್ಯವಾಗಿವೆ ಎಂದು KPCC ಅಧ್ಯಕ್ಷ D.K. ಶಿವಕುಮಾರ್ ಸ್ಫೋಟಕ ಆರೋಪ ಮಾಡಿದ್ದಾರೆ. ಟ್ರಸ್ಟ್​ಗಳು 2 ಸಾವಿರಕ್ಕಿಂತ ಹೆಚ್ಚಿನ ಹಣ ದೇಣಿಗೆಯಾಗಿ ಪಡೆಯುವಂತಿಲ್ಲ. ಚೆಕ್ ಮೂಲಕವೇ ಪಡೆಯಬೇಕು. ಹೀಗಿರುವಾಗ ಅಲ್ಲಿ ನೋಟು ಎಣಿಕೆ ಯಂತ್ರ ಯಾಕಿತ್ತು..? ಆ ಕಚೇರಿಯಲ್ಲಿ ಕಪ್ಪು ಹಣ ಬಿಳಿ ಹಣವಾಗಿ ಪರಿವರ್ತನೆಯಾಗ್ತಿತ್ತು. ಈ ವಿಚಾರವಾಗಿ ಮುಂದೆ ದಾಖಲೆ ಸಮೇತ ಮಾತನಾಡುತ್ತೇವೆ ಎಂದು D.K.ಶಿವಕುಮಾರ್ ಹೇಳಿದ್ದಾರೆ. ಪ್ರತಿಭಟನೆ ಬಳಿಕ ಕಾಂಗ್ರೆಸ್‌ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದೆ. ರಾಜ್ಯ ಕಾಂಗ್ರೆಸ್​​​​​ ಉಸ್ತುವಾರಿ ಸುರ್ಜೇವಾಲಾ,  ಮಾಜಿ ಸಿಎಂ ಸಿದ್ದರಾಮಯ್ಯ, KPCC ಅಧ್ಯಕ್ಷ D.K ಶಿವಕುಮಾರ್​ ಸೇರಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬಿಜೆಪಿ