Webdunia - Bharat's app for daily news and videos

Install App

PSI ಹಗರಣದಲ್ಲಿ ‘ಕೈ’ MLA ಪುತ್ರ, ಸೋದರ?

Webdunia
ಸೋಮವಾರ, 11 ಜುಲೈ 2022 (21:16 IST)
ಪಿಎಸ್​ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಆಳಕ್ಕೆ ಹೋದಷ್ಟೂ ಹಲವು ಗಣ್ಯರ ಹೆಸರು ಹೊರಕ್ಕೆ ಬರುತ್ತಿದೆ. ಕೆಲ ದಿನಗಳ ಹಿಂದಷ್ಟೇ ಎಡಿಜಿಪಿ ಅಮೃತ್ ಪೌಲ್ ಅವರು ಈ ಕೇಸ್​ನಲ್ಲಿ ಸಿಲುಕಿಕೊಂಡಿದ್ದರು. ಇದೀಗ ಕಾಂಗ್ರೆಸ್​ ಶಾಸಕರೊಬ್ಬರ ಮಗ ಹಾಗೂ ಅವರ ಸಹೋದರ ಕೂಡ ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಅಫಜಲಪುರದ ಕಾಂಗ್ರೆಸ್​ ಶಾಸಕ ಎಂ.ವೈ.ಪಾಟೀಲ್ ಪುತ್ರ ಅರುಣ್ ಪಾಟೀಲ್ ಹಾಗೂ ಶಾಸಕರ ಸಹೋದರ ಎಸ್.ವೈ.ಪಾಟೀಲ್​ಗೆ ಸಂಕಷ್ಟ ಎದುರಾಗಿದೆ. ಶಾಸಕ ಎಂ.ವೈ.ಪಾಟೀಲ್ ಅವರ ಗನ್​ಮ್ಯಾನ್​ ಹಯ್ಯಾಳಿ ದೇಸಾಯಿ ಅವರನ್ನು ಪಿಎಸ್​ಐ ಮಾಡುವ ಉದ್ದೇಶದಿಂದ ಅಕ್ರಮ ನಡೆದಿರುವ ಶಂಕೆ ಉಂಟಾಗಿದೆ. ಹಯ್ಯಾಳಿ ದೇಸಾಯಿ ಅವರನ್ನು ಪಿಎಸ್‌ಐ ಮಾಡಬೇಕು ಎಂದು ಅರುಣ್​ ಅವರು, ಮಂಜುನಾಥ್‌ ಮೇಳಕುಂದಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಈ ಸಂಬಂಧ ಮಾತನಾಡಲು ಮಂಜುನಾಥ್‌ ಮೇಳಕುಂದಿಗೆ ಕರೆಮಾಡಿದ್ದ ಆರ್​.ಡಿ.ಪಾಟೀಲ್​ ಅವರು, ಅರುಣ್ ಜತೆ ಮಾತನಾಡುವಂತೆ ಸೂಚಿಸಿರುವುದಾಗಿ ತಿಳಿದು ಬಂದಿದೆ. ಈ ಸೂಚನೆ ಮೇರೆಗೆ ಮಂಜುನಾಥ್‌ ಮೇಳಕುಂದಿ ಶಾಸಕರ ಪುತ್ರ ಅರುಣ್ ಕುಮಾರ್​ಗೆ ಕರೆ ಮಾಡಿ 30 ಲಕ್ಷಕ್ಕೆ ಡೀಲ್ ಕುದುರಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments