Daily Horoscope
✕

ರಸ್ತೆಗುಂಡಿ ಮುಚ್ಚಲು ಆಗ್ರಹಿಸಿ ‘ಕೈ’ ಪ್ರೊಟೆಸ್ಟ್

Webdunia
ಶುಕ್ರವಾರ, 21 ಅಕ್ಟೋಬರ್ 2022 (18:36 IST)
ಬೆಂಗಳೂರಿನಲ್ಲಿ ಡೆಡ್ಲಿ ರಸ್ತೆಗುಂಡಿಗಳಿಗೆ ಅಮಾಯಕರ ಬಲಿಯಾಗುತ್ತಿರುವ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್​ ಅಸ್ತ್ರ ಪ್ರಯೋಗಿಸುತ್ತಿದೆ. ರಸ್ತೆ ಗುಂಡಿಗಳನ್ನ ಮುಚ್ಚದ ಸರ್ಕಾರದ ವಿರುದ್ಧ ಕಾಂಗ್ರೆಸ್​ ನಾಯಕರು ಪ್ರತಿಭಟನೆಗಿಳಿದಿದ್ದಾರೆ. ಬೆಂಗಳೂರಿನ ಆನಂದ್ ರಾವ್ ಸರ್ಕಲ್​ನಿಂದ ಸಿಎಂ ನಿವಾಸದವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಶಾಸಕ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ಮಾಜಿ ಶಾಸಕ ಪ್ರಿಯಕೃಷ್ಣ, ಮಾಜಿ ಮೇಯರ್ ಪದ್ಮಾವತಿ, ಮಂಜುನಾಥ್ ರೆಡ್ಡಿ ಭಾಗಿಯಾಗಿದ್ದಾರೆ. ಇನ್ನು ಮಾಜಿ ಕಾರ್ಪೊರೇಟರ್​ಗಳಿಂದ ಹಿಡಿದು ನೂರಾರು ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ರಸ್ತೆಗುಂಡಿಗಳನ್ನು ಮುಚ್ಚಲು ಆಗ್ರಹಿಸಿರುವುದರ ಜೊತೆ ಕಾಂಗ್ರೆಸ್​ ಶಾಸಕರಿಗೆ ಅನುದಾನ ತಾರತಮ್ಯ ಖಂಡಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ, ಬಿಬಿಎಂಪಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆ ನಗರ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಹೆಚ್ಚಾಗಲಿದೆ ಚಳಿ, ಇಂದು ನಿಮ್ಮ ಜಿಲ್ಲೆಯಲ್ಲಿ ಹವಾಮಾನ ಹೇಗಿರಲಿದೆ

ಹಿಂದೂ ಯುವಕನ ಲವ್ ಮಾಡಿದ್ದಕ್ಕೆ ಮನೆಯವರೇ ಯುವತಿಯನ್ನು ಎಳೆದೊಯ್ದರು: ಮಂಗಳೂರು ಕಾಲೇಜು ಆವರಣದಲ್ಲಿ ನಡೆದ ಘಟನೆ Video

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ವಿಜಯೇಂದ್ರ ಸವಾಲು

ಮಂಡ್ಯದಲ್ಲಿ ದಿಢೀರ್ ಬಸ್ ಅಡ್ಡಗಟ್ಟಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಯುವಕ Video

ಆಭರಣ ಪ್ರಿಯರಿಗೆ ಮಹತ್ವದ ಮಾಹಿತಿ: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಇಂದಿನ ಚಿನ್ನ ಹಾಗೂ ಬೆಳ್ಳಿ ದರ

ಮುಂದಿನ ಸುದ್ದಿ
Show comments