Webdunia - Bharat's app for daily news and videos

Install App

ಕಲಬುರಗಿ: ಜಯದೇವ ಹೃದ್ರೋಗ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Sampriya
ಭಾನುವಾರ, 22 ಡಿಸೆಂಬರ್ 2024 (15:52 IST)
Photo Courtesy X
ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರು ನಗರದ ಡಾ.ಎಸ್.ಎಂ. ಪಂಡಿತ್ ‌ರಂಗಮಂದಿರದ ಎದುರಿನ ಏಳು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಉದ್ಘಾಟಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ಅವರು ಆಸ್ಪತ್ರೆಯ ಹೊರರೋಗಿ ವಿಭಾಗವನ್ನು ಉದ್ಘಾಟಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಅವರು ಕ್ಯಾತಲ್ಯಾಬ್ ಸಂಕೀರ್ಣವನ್ನು ಲೋಕಾರ್ಪಣೆ ‌ಮಾಡಿದರು.

ಈ ಸಮಾರಂಭದಲ್ಲಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಸಣ್ಣ ಕೈಗಾರಿಕೆ ‌ಸಚಿವ ಶರಸಬಸಪ್ಪ ದರ್ಶನಾಪುರ, ಸಂಸದ ರಾಧಾಕೃಷ್ಣ ದೊಡ್ಡಮನಿ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಚನ್ನಾರೆಡ್ಡಿ ಪಾಟೀಲ ತುನ್ನೂರ, ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ವಿಧಾನಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಶಶೀಲ್ ನಮೋಶಿ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ‌ಮೊಹಮ್ಮದ್ ಮೊಹ್ಸಿನ್, ಜಯದೇವ ‌ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಭಾಗವಹಿಸಿದ್ದಾರೆ.

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಗೈರು

ಇನ್ನೂ ಆಸ್ಪತ್ರೆಯ ತೀವ್ರ ನಿಗಾ ಘಟಕ ಉದ್ಘಾಟಿಸಬೇಕಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಶಸ್ತ್ರಚಿಕಿತ್ಸಾ ಸಂಕೀರ್ಣ ಉದ್ಘಾಟಿಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments