ಕಲಬುರಗಿ : ಅತಂತ್ರವಾಗಿ ಉಳಿದಿರುವ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಯಾವ ಪಕ್ಷದ ಜೊತಗೆ ಮೈತ್ರಿ ಮಾಡುವ ಕುರಿತಂತೆ ನಾಳೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಸಭೆಯ ಬಳಿಕ ತಮ್ಮ ನಿರ್ಧಾರ ತಿಳಿಸಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಸೋಮವಾರ ಜೆಡಿಎಸ್ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ಶಾಸಕಾಂಗ ಪಕ್ಷದ ಸಭೆ ಕರೆದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಶಾಸಕಾಂಗ ಸಭೆಯಲ್ಲಿ ನಿರ್ಧಾರ ಪ್ರಕಟಿಸಲಿದ್ದಾರ ಎನ್ನಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ, ನಮ್ಮ ಶಾಸಕರ ಜತೆ ಎಲ್ಲ ಬೆಳವಣೆಗಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅವರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಜೆಡಿಎಸ್ ಪಾಲಿಕೆ ಸದಸ್ಯರನ್ನು ಬೆಂಗಳೂರಿನಿಂದ ಬೇರೆಡೆ ಸ್ಥಳಾಂತರ ಮಾಡಲಾಗುತ್ತಿದ್ದು, ಮುಂದಿನ ರಾಜಕೀಯ ಲೆಕ್ಕಚಾರದ ಹಿನ್ನೆಲೆಯಲ್ಲಿ ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ ಬೆಂಬಲಿಸಲು ಜೆಡಿಎಸ್ ವರಿಷ್ಟ ಹೆಚ್.ಡಿ.ದೇವೇಗೌಡ ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದೆ.