Webdunia - Bharat's app for daily news and videos

Install App

ಕಲಬುರ್ಗಿ: ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ

Sampriya
ಸೋಮವಾರ, 7 ಏಪ್ರಿಲ್ 2025 (16:15 IST)
ಕಲಬುರಗಿ: ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅತಿಥಿ ಶಿಕ್ಷಕನನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತ ಶಿಕ್ಷಕನನ್ನು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿವರಾಜ ಹಣಮಂತ (32) ಎಮದು ಗುರುತಿಸಲಾಗಿದೆ.

8ನೇ ತರಗತಿ ಓದುತ್ತಿದ್ದ 14 ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ. ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ಪೋಷಕರು ಯುಗಾದಿ ಹಬ್ಬಕ್ಕೆಂದು ತಮ್ಮ ತವರು ಮನೆಗೆ ಹೋಗಿದ್ದಾರೆ. ಪರೀಕ್ಷೆಯ ಹಿನ್ನೆಲೆ ಸಂತ್ರಸ್ತೆ ಬಾಲಕಿ ಮನೆಯಲ್ಲಿಯೇ ಉಳಿದಿದ್ದಳು.

ಅದೇ ಗ್ರಾಮದಲ್ಲಿನ ಅಜ್ಜಿಯ ಮನೆಗೆ ಹೋಗಿದ್ದ ಬಾಲಕಿ, ಸಂಜೆ ವಾಪಸ್ ಬಂದು ಮನೆಯಲ್ಲಿ ಸ್ನೇಹಿತರ ಜತೆಗೆ ಟಿ.ವಿ. ನೋಡುತ್ತಿದ್ದಳು. ಆಕೆಯನ್ನು ಹಿಂಬಾಲಿಸಿಕೊಂಡು ಬಂದ ಶಿವರಾಜ, ಮನೆಗೆ ನುಗ್ಗಿದನು. ಇದರಿಂದ ಬಾಲಕಿಯ ಸ್ನೇಹಿತರು ಹೆದರಿ ಹೊರಗೆ ಓಡಿಹೋದರು ಎಂದು ಹೇಳಿದ್ದಾರೆ.

ಈ ವೇಳೆ ಬಾಲಕಿ ಆರೋಪಿಯಲ್ಲಿ ಮನೆಯಲ್ಲಿ ತಂದೆ ತಾಯಿ ಇಲ್ಲದ ವೇಳೆ ಯಾಕೆ ಬಂದಿದ್ದು ಎಂದು ಕೇಳಿದ್ದಾಳೆ.  ನಾನು ನಿನ್ನ ಪ್ರೀತಿಸುತ್ತೇನೆ ಎಂದು ಪುಸುಲಾಯಿಸಿ ಮತ್ತು ಹೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದನು. ಪ್ರಜ್ಞೆ ತಪ್ಪಿ ಬಿದ್ದಿದ್ದ ಬಾಲಕಿಯನ್ನು ಪೋಷಕರು ಕಲಬುರಗಿ ನಗರದ ಜಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಎಚ್ಚರವಾದಾಗ ನಡೆದ ಕೃತ್ಯವನ್ನು ಪೋಷಕರಿಗೆ ತಿಳಿಸಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಮುಂದಿನ ಸುದ್ದಿ
Show comments