ಕಲಬುರಗಿ: ರೌಡಿಶೀಟರ್‌ಅನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಬರ್ಬರವಾಗಿ ಹತ್ಯೆ ಮಾಡಿ, ರೈಲ್ವೆ ಹಳಿ ಬಳಿ ಎಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಕಲಬುರಗಿ (ಜಿಲ್ಲೆಯ ಪಟ್ಟಣ ಗ್ರಾಮದಲ್ಲಿ ನಡೆದಿದೆ. ಮೃತ ರೌಡಿಶೀಟರ್ ಅನ್ನು ಸೋಮು ತಾಳಿಕೋಟಿ (40)ಎಂದು ಗುರುತಿಸಲಾಗಿದೆ.
ಸೋಮುನನ್ನು ಕಲಬುರಗಿಯ ಪಟ್ಟಣ ಗ್ರಾಮದಲ್ಲಿ ಬರ್ಬರವಾಗಿ ಹತ್ಯೆ ಮಾಡಿ ನಂತರ ದೇಹವನ್ನು ಆಳಂದ ರಸ್ತೆಯ ರೈಲ್ವೆ ಹಳಿ ಬಳಿ ಶವ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇನ್ನೂ ಪ್ರಾಥಮಿಕ ತನಿಖೆಯಲ್ಲಿ ಈ ಹತ್ಯೆಗೆ ಹಳೆಯ ವೈಷಮ್ಯವೇ ಕಾರಣ ಎಂದು ತಿಳಿದುಬಂದಿದೆ.
ಕೆಲ ತಿಂಗಳ ಹಿಂದೆ ಸೋಮು ಪಟ್ಟಣ ಗ್ರಾಮದ ಡಾಬಾ ಮಾಲೀಕನ ಜೊತೆ ಈತ ಜಗಳವಾಡಿದ್ದನು. ಅಲ್ಲದೆ ಸೋಮು ಮತ್ತು ಆತನ ಸಂಗಡಿಗರು ಡಾಬಾ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಹೀಗಾಗಿ ಹಳೆಯ ವೈಷಮ್ಯಕ್ಕಯೇ ಈ ಕೊಲೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಹಂತಕರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.