Webdunia - Bharat's app for daily news and videos

Install App

ಕಲಾಂ ಪಾರ್ಥಿವ ಶರೀರ ಮಧ್ಯಾಹ್ನದ ವೇಳೆಗೆ ದೆಹಲಿಗೆ ರವಾನೆ

Webdunia
ಮಂಗಳವಾರ, 28 ಜುಲೈ 2015 (11:16 IST)
ಪಾಠ ಮಾಡುತ್ತಲೇ ಕೊನೆಯುಸಿರೆಳೆದಿದ್ದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪುರಸ್ಕೃತ, ಖ್ಯಾತ ವಿಜ್ಞಾನಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು ಇಂದು ರಾಷ್ಟ್ರ ರಾಜಧಾನಿ ದೆಹಲಿಗೆ ತರಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರೆ ಕೇಂದ್ರ ಸಂಪುಟ ಸಚಿವರು ಸ್ವೀಕರಿಸಲಿದ್ದಾರೆ. 
 
ಮೂಲಗಳ ಪ್ರಕಾರ, ವಿಶೇಷ ವಿಮಾನದಲ್ಲಿ ಅವರ ಪಾರ್ಥಿವ ಶರೀರವನ್ನು ದೆಹಲಿಗೆ ತರಲಾಗುತ್ತಿದ್ದು, ವಿಮಾನವು ಮಧ್ಯಾಹ್ನ 12.30ರ ವೇಳೆಗೆ ಆಗಮಿಸುವ ಸಾಧ್ಯತೆ ಇದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಕೇಂಗ್ರ ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹಾಗೂ ಮೂರೂ ಸೇನೆಗಳ ಮುಖ್ಯಸ್ಥರು ಪಾರ್ಥಿವ ಶರೀರವನ್ನು ಸ್ವೀಕರಿಸಿ ನಮನ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆ ವರೆಗೆ ನಗರದ ಕಲಾ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕಿಡಲಾಗುವುದು. ಅಲ್ಲದೆ ಅಂತಿಮ ಸಂಸ್ಕಾರಕ್ಕಾಗಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ರಕ್ಷಣಾ ಇಲಾಖೆ ಮಾಡಿಕೊಂಡಿದೆ ಎಂದು ಹೇಳಲಾಗಿದ್ದು, ತಮಿಳುನಾಡಿನ ರಾಮೇಶ್ವರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂಬುದಾಗಿ ಮೂಲಗಳು ತಿಳಿಸಿವೆ. 
 
2002ರಿಂದ 2007ರ ವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದ ಕಲಾಂ ಉತ್ತಮ ಸೇವೆ ಸಲ್ಲಿಸಿ ಜನ ನಾಯಕರಾಗಿ ಸಾರ್ವಜನಿಕರ ಮನದಲ್ಲಿ ಮನೆ ಮಾಡಿದ್ದರು. ಅಲ್ಲದೆ ವೈಜ್ಞಾನಿಕ ಕ್ಷೇತ್ರದಲ್ಲಿ ಮಹತ್ತರ ಸೇವೆಯನ್ನು ಸಲ್ಲಿಸಿದ್ದ ಅವರು, ಕ್ಷಿಪಣಿಯ ಜನಕ ಎಂಬ ಖ್ಯಾತಿ ಪಡೆದಿದ್ದರು. ಜೀವನದುದ್ದಕ್ಕೂ ಕೂಡ ಅವಿವಾಹಿತರಾಗಿಯೇ ಜೀವನ ಪೂರೈಸಿದ ಕಲಾಂ, ನಿನ್ನೆ ಮೆಘಾಲಯದ ಐಐಟಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments