Publish Date: Fri, 07 Jul 2017 (20:11 IST)
Updated Date: Fri, 07 Jul 2017 (20:14 IST)
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ಗೆ ಇವತ್ತೇ ಕೊನೆಯ ದಿನವಾಗಿದೆ ಎಂದು ಫೇಸ್‌ಬುಕ್ ಪೇಜ್‌ನಲ್ಲಿ ಜೀವ ಬೆದರಿಕೆ ಸಂದೇಶ ಪೋಸ್ಟ್ ಮಾಡಲಾಗಿದೆ.
ಮಂಗಳೂರಿನ ಮುಸ್ಲಿಂ ಸಂಘಟನೆಯ ಹೆಸರಲ್ಲಿ ಫೇಸ್‌ಬುಕ್ ಪೇಜ್‌ನಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ಗೆ ಜೀವ ಬೆದರಿಕೆಯೊಡ್ಡಲಾಗಿದೆ. ಆತನೊಬ್ಬ ಭಯೋತ್ಪಾದಕ ಎಂದು ಹೀಯಾಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಭಾಕರ್ ಸತ್ತ ಮೇಲೆ ಆತನ ಮೇಲೆ ರಾಷ್ಟ್ರಧ್ವಜ ಹಾರಿಸುತ್ತಿರೋ ಅಥವಾ ಕೇಸರಿ ಧ್ವಜ ಹಾರಿಸುತ್ತಿರೋ ಎಂದು ಪ್ರಶ್ನಿಸಲಾಗಿದೆ.
ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.