Select Your Language

Notifications

webdunia
webdunia
webdunia
webdunia

ಆರೋಪಗಳಿಂದಾಗಿ ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆಗೆ ಶರಣಾಗಿರಬಹುದು: ಸಿಎಂ

ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್
ಬೆಂಗಳೂರು , ಮಂಗಳವಾರ, 5 ಜುಲೈ 2016 (15:50 IST)
ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರ ವಿರುದ್ಧ ಆರೋಪಗಳು ಕೇಳಿ ಬಂದಿದ್ದವು. ಅವರ ವಿರುದ್ಧ ತನಿಖೆಯೂ ನಡೆಯುತ್ತಿತ್ತು. ಇದರಿಂದ ಅವರು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯುವಕಣ ಅಪಹರಣಕ್ಕೆ ಸಂಬಂಧಿಸಿದಂತೆ ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರ ವಿರುದ್ಧ ಆರೋಪ ಕೇಳಿ ಬಂದಿದ್ದು, ಈ ಕುರಿತು ತನಿಖೆಯೂ ನಡೆಯುತ್ತಿತ್ತು. ಇದಕ್ಕೆ ಮನನೊಂದು ಅವರು ಆತ್ಮಹತ್ಯಗೆ ಶರಣಾಗಿರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ನಿನ್ನೆ ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ತನ್ನ ಹೆಂಡತಿಯ ಮನೆಗೆ ತೆರಳಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದರು. ಇಂದು ಮುಂಜಾನೆ 11.30ಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಿವೈಎಸ್‌ಪಿ ಆತ್ಮಹತ್ಯೆ ಕುರಿತು ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಯಸ್ಕರ ಇಲಾಖೆಯಲ್ಲಿ ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ