ಬೆಂಗಳೂರು: ಬಹುಭಾಷಾ ನಟ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಆದರೂ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗಲ್ಲ.
ಕಮಲ್ ಹಾಸನ್ ಕನ್ನಡಕ್ಕೆ ಅವಮಾನ ಮಾಡಿದರು ಎಂಬ ಕಾರಣಕ್ಕೆ ಅವರ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ನಿಷೇಧ ಹೇರಲಾಗಿತ್ತು. ಕರ್ನಾಟಕ ವಾಣಿಜ್ಯ ಮಂಡಳಿ ನಿರ್ಧಾರವನ್ನು ಸರ್ಕಾರವೂ ಬೆಂಬಲಿಸಿತ್ತು. ಕರ್ನಾಟಕ ಹೈಕೋರ್ಟ್ ಕೂಡಾ ಕಮಲ್ ಗೆ ಕ್ಷಮೆ ಕೇಳಲು ಸೂಚಿಸಿತ್ತು. ಆದರೆ ಕ್ಷಮೆ ಕೇಳದೇ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಸೂಚಿಸಿದೆ. ಆದರ ಹಂಚಿಕೆದಾರ ವೆಂಕಟೇಶ್ ನಾನು ಸಿನಿಮಾ ರಿಲೀಸ್ ಮಾಡಲ್ಲ. ವಾಣಿಜ್ಯ ಮಂಡಳಿ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದಿದ್ದಾರೆ. ಹೀಗಾಗಿ ಸುಪ್ರೀಂಕೋರ್ಟ್ ಅನುಮತಿ ಕೊಟ್ಟರೂ ರಾಜ್ಯದಲ್ಲಿ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಕಡಿಮೆ.