Daily Horoscope
✕

ಕಂಪ್ಲಿ ಸೇತುವೆ ಮುಳುಗಡೆ ಭೀತಿ: ತುಂಗಭದ್ರ ನದಿ ವೀಕ್ಷಣೆಗೆ ಜನಸಾಗರ

Webdunia
ಶುಕ್ರವಾರ, 20 ಜುಲೈ 2018 (15:23 IST)
ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 70 ಸಾವಿರಕ್ಕೂ ಹೆಚ್ಚು ಕೂಸೆಕ್ ನೀರನ್ನು 20 ಗೇಟ್‍ಗಳ ಮೂಲಕ ನದಿಗೆ ಬಿಡಲಾಗಿದೆ. ಇದರಿಂದ ಕಂಪ್ಲಿ ಪಟ್ಟಣದ ಬಳಿಯ ಕಂಪ್ಲಿ-ಗಂಗಾವತಿ ಸೇತುವೆ ಮುಳುಗಡೆಗೆ ಕೆಲವು ಅಡಿಯಷ್ಟೇ ಬಾಕಿಯಿದೆ.

 
ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಸಂಪರ್ಕದ ಕೊಂಡಿಯಾದ ಕಂಪ್ಲಿ ಕೋಟೆಯ ತುಂಗಾಭದ್ರ ನದಿಯಲ್ಲಿ ಉಕ್ಕಿ ಬರುತ್ತಿರುವ ನೀರನ್ನು ಕಣ್ತುಂಬಿಕೊಳ್ಳಲು ತಂಡ ತಂಡವಾಗಿ ನದಿಯತ್ತ ಜನ ದಾಪುಗಾಲಿಡುತ್ತಿದ್ದಾರೆ. ಕಳೆದ ನಾಲ್ಕು ವರ್ಷದ ಹಿಂದೆ ಈ ಸೇತುವೆ ಮುಳುಗಡೆಯಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಆದರೆ, ನಂತರ ಭರ್ತಿಯಾಗದೇ ಇದ್ದರಿಂದ ಈ ಸೇತುವೆ ಮುಳುಗಡೆ ಭೀತಿಯನ್ನು ಜನ ಕಂಡಿರಲಿಲ್ಲ. ಆದರೆ ಈ ವರ್ಷ ಸೇತುವೆ ಮುಳುಗಡೆ ಭೀತಿ ಎದುರಾಗಿದೆ. 

 
ಕಂಪ್ಲಿ-ಕೋಟೆಯ ಹೊರವಲಯದ ಬಾಳೆ ತೋಟಗಳಿಗೆ ನೀರು ನುಗ್ಗಿದೆ. ಹೊಳೆ ಆಂಜನೇಯ ದೇವಸ್ಥಾನ ಜಲಾವೃತವಾಗುವ ಸಾಧ್ಯತೆಯಿದೆ. ಒಂದು ಕಡೆ ರೈತರಿಗೆ ಹರ್ಷವಾದರೆ, ಮತ್ತೊಂದು ಕಡೆ ನದಿ ಪಾತ್ರದ ಜನರಿಗೆ ಸಂಕಷ್ಟ ಎದುರಾದಂತಾಗಿದೆ. ನದಿಗೆ ನೀರು ಬಿಟ್ಟಿರುವುದನ್ನು ನೋಡಲು ಕಂಪ್ಲಿ, ರಾಮಸಾಗರ, ಕೊಟ್ಟಾಲ್ ಸುತ್ತಮುತ್ತಲ ಪ್ರದೇಶದ ಜನ ಆಗಮಿಸುತ್ತಿದ್ದಾರೆ. ಸೇತುವೆಯ ತಳಭಾಗದಲ್ಲಿ ನೀರು ಹರಿಯುತ್ತಿದೆ. ಇನ್ನೇನು ಸೇತುವೆ ಮೇಲೆ ನೀರು ಹರಿಯಲು ಕೆಲವು ಅಡಿ ಬಾಕಿಯಿದೆ. ಆದಗ್ಯೂ ಸಹ ಭಾರೀ ಗಾತ್ರದ ವಾಹನಗಳ ಸಂಚಾರ ನಿಂತಿಲ್ಲ. 

ತುಂಗಭದ್ರಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿದರಿಂದ ನದಿಯಲ್ಲಿ ನೀರು ಉಕ್ಕಿ ಹರಿದು ಬರುತ್ತಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ನೀರಿನಿಂದ ಸಾರ್ವಜನಿಕರು ದೂರ ಉಳಿಯಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಮುಂದಿನ ಸುದ್ದಿ
Show comments