Select Your Language

Notifications

webdunia
webdunia
webdunia
webdunia

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ: ಸಿಎಂ ಸಿದ್ದರಾಮಯ್ಯ, ಬಿವೈ ವಿಜಯೇಂದ್ರ ಸಂತಾಪ

Anchor Aparna

Krishnaveni K

ಬೆಂಗಳೂರು , ಶುಕ್ರವಾರ, 12 ಜುಲೈ 2024 (08:55 IST)
Photo Credit: Facebook
ಬೆಂಗಳೂರು: ಅಪ್ಪಟ ಕನ್ನಡತಿ, ಕನ್ನಡದ ನಿರೂಪಕಿ, ನಟಿ ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಾಯಕ ಬಿವೈ ವಿಜಯೇಂದ್ರ ಸೇರಿದಂತೆ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಿರೂಪಕಿ ಅಪರ್ಣಾ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದರು. ಅವರಿಗೆ 57 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡದಲ್ಲಿ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆ ಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇನ್ನು ಬಿಜೆಪಿ ನಾಯಕ ಬಿವೈ ವಿಜಯೇಂದ್ರ ಕೂಡಾ ಅಪರ್ಣಾ ಸಾವಿಗೆ ಕಂಬನಿ ಮಿಡಿದಿದ್ದಾರೆ. ಸರಕಾರಿ ಕಾರ್ಯಕ್ರಮಗಳು, ದೂರದರ್ಶನದಲ್ಲಿ ನಿರೂಪಕಿಯಾಗಿದ್ದ ಅವರು, ಬೆಂಗಳೂರಿನ ಮೆಟ್ರೊದಲ್ಲಿ ಹಿನ್ನೆಲೆ ಧ್ವನಿ ನೀಡಿ ಖ್ಯಾತಿ ಪಡೆದವರು. ‘ಮಸಣದ ಹೂವು’ ಸೇರಿ ಹಲವು ಚಲನಚಿತ್ರಗಳು, ಧಾರವಾಹಿಗಳಲ್ಲೂ ಅವರು ನಟಿಸಿದ್ದರು ಎಂದು ತಿಳಿಸಿದ್ದಾರೆ.  ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಇದಲ್ಲದೆ ಅಪಾರ ಕನ್ನಡಾಭಿಮಾನಿಗಳು, ಸಿನಿಮಾ ಸೆಲೆಬ್ರಿಟಿಗಳು ಅಪರ್ಣಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಅವರ ಅಂತ್ಯ ಕ್ರಿಯೆ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಖ್ಯಾತ ಇಎನ್‌ಟಿ ಸ್ಪೆಷಲಿಸ್ಟ್ ಡಾ.ಸತೀಶ ಪೂಜಾರಿ ಹೃದಯಾಘಾತದಿಂದ ಸಾವು