Publish Date: Tue, 09 Nov 2021 (14:29 IST)
Updated Date: Tue, 09 Nov 2021 (14:33 IST)
ಗೋವಾದಲ್ಲಿ (Goa) ಕನ್ನಡ ಭವನ (Kannada Bhavan) ನಿರ್ಮಾಣಕ್ಕೆ 10 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಣೆ ಮಾಡಿದ್ದಾರೆ.ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ನೇತೃತ್ವದಲ್ಲಿ ಗೋವಾ ಕನ್ನಡ ಮಹಾ ಸಂಘ ಮುಖ್ಯಮಂತ್ರಿಗಳನ್ನು (CM Basavaraj Bommai) ಭೇಟಿ ಮಾಡಿದ್ದು, ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು (Kannada) ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ ಎಂದು ಹೇಳಿದರು.