Publish Date: Mon, 01 Nov 2021 (20:52 IST)
Updated Date: Mon, 01 Nov 2021 (20:53 IST)
ಜಿಲ್ಲಾಡಳಿತದ ವತಿಯಿಂದ 66 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್ ಹೊಳ್ಳ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿ.ಪಂ. ಉಪಕಾರ್ಯದರ್ಶಿ ಲಕ್ಷ್ಮಿ, ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ನಾನಾ ಇಲಾಖೆ ಅಧಿಕಾರಿಗಳು ಇತರರು ಪಾಲ್ಗೊಂಡಿದ್ದರು.