Publish Date: Thu, 25 Aug 2022 (14:23 IST)
Updated Date: Thu, 25 Aug 2022 (17:21 IST)
ಬೆಂಗಳೂರು : 75 ವರ್ಷಗಳ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿದ್ದ ಸರ್ಕಾರ ಈಗ ಕನ್ನಡ ರಾಜ್ಯೋತ್ಸವ ಆಚರಣೆಗೂ ಮುಂದಾಗಿದೆ.
ನವೆಂಬರ್ 1ಕ್ಕೆ ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಆದೇಶ ಹೊರಡಿಸುತ್ತೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 75 ವರ್ಷಗಳ ಬಳಿಕ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಿ ಇತಿಹಾಸ ನಿರ್ಮಾಣ ಮಾಡಲಾಗಿದೆ.
ಅದರಂತೆ ನವೆಂಬರ್ 1ಕ್ಕೆ ಕನ್ನಡ ರಾಜ್ಯೋತ್ಸವವನ್ನು ಚಾಮರಾಜಪೇಟೆ ಮೈದಾನದಲ್ಲಿ ಆಚರಣೆ ಮಾಡ್ತೀವಿ ಎಂದು ತಿಳಿಸಿದರು.