Publish Date: Thu, 13 Oct 2022 (12:27 IST)
Updated Date: Thu, 13 Oct 2022 (12:13 IST)
ಹಾವೇರಿ : ಮುಂದಿನ ವರ್ಷದ ಜನವರಿ 6, 7 ಮತ್ತು 8 ರಂದು ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸಿ ದಿನಾಂಕವನ್ನುಅಂತಿಮಗೊಳಿಸಿದ್ದಾರೆ.
ಅಕ್ಟೋಬರ್ 20ರಂದು ಹಾವೇರಿಯಲ್ಲಿ ಸಿದ್ಧತಾ ಸಭೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಮ್ಮೇಳನಕ್ಕೆ ಎಂಟರಿಂದ ಹತ್ತು ಲಕ್ಷ ಜನ ಬರುವ ನಿರೀಕ್ಷೆಯಿದೆ. ಪ್ರತಿ ದಿನ 2.50 ಲಕ್ಷ ಜನರಿಗೆ ಊಟೋಪಚಾರ, 30 ಸಾವಿರ ಮಂದಿಗೆ ವಸತಿ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ.