Publish Date: Mon, 10 Jan 2022 (09:46 IST)
Updated Date: Mon, 10 Jan 2022 (09:49 IST)
ಬೆಂಗಳೂರು: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಚಂಪಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡ ನಾಡು-ನುಡಿಗಾಗಿ ಹೋರಾಟ ಮಾಡಿ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದ ಚಂಪಾ ಇನ್ನು ನೆನಪು ಮಾತ್ರ.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಚಂಪಾ ಎಂದೇ ಖ್ಯಾತರಾಗಿದ್ದ ಅವರು ಹಾವೇರಿ ಜಿಲ್ಲೆಯ ಹತ್ತಿಮುತ್ತೂರಿನಲ್ಲಿ ಜನಿಸಿದ್ದರು. ಚಂಪಾ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿದಂತೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.