Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಕನ್ನಡಿಗರು ಉದ್ಯಮರಂಗದಲ್ಲಿ ಪ್ರಗತಿ ಸಾಧಿಸಬೇಕು : ಬೊಮ್ಮಾಯಿ

webdunia
ಶನಿವಾರ, 16 ಜುಲೈ 2022 (14:29 IST)
ಹುಬ್ಬಳ್ಳಿ : ಕಠಿಣ ಪರಿಶ್ರಮದ ಮೂಲಕ ಕನ್ನಡಿಗರು ಉದ್ಯಮರಂಗದಲ್ಲಿ ಪ್ರಗತಿ ಸಾಧಿಸಬೇಕು.
 
ಈ ಮೂಲಕ ರಾಜ್ಯವನ್ನು ಅಭಿವೃದ್ಧಿಯಲ್ಲಿ ಮುಂದೆ ಬರುವಂತೆ ಮಾಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿನ ಕರ್ನಾಟಕ ಮಟಿರಿಯಲ್ ಟೆಸ್ಟಿಂಗ್ ಮತ್ತು ರಿಸರ್ಚ್ ಸೆಂಟರ್ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೈಗಾರಿಕಾ ಉತ್ಪನ್ನಗಳ ಗುಣಮಟ್ಟದಲ್ಲಿ ಸ್ವಯಂ ಶಿಸ್ತು ತರುವ ಈ ಸಂಸ್ಥೆಗೆ ಎನ್ಎಬಿಎಲ್ ಮಾನ್ಯತೆ ದೊರೆತಿರುವುದು ಸಂತಸ ತಂದಿದೆ ಎಂದರು. 

ಹುಬ್ಬಳ್ಳಿಯ ಕೆಎಂಟಿಆರ್ಸಿ ಅತ್ಯಾಧುನಿಕ ಉಪಕರಣಗಳ ಪೂರೈಕೆಗಾಗಿ 4 ಕೋಟಿ ರೂಪಾಯಿ ಕೋರಿ ಸಂಸ್ಥೆ ಪ್ರಸ್ತಾವನೆ ಸಲ್ಲಿಸಿದೆ. ಅದಕ್ಕೆ ಸರ್ಕಾರ ಹಣಕಾಸು ನೆರವು ನೀಡಲಿದೆ.

ಹುಬ್ಬಳ್ಳಿ, ಧಾರವಾಡದಲ್ಲಿ ಎಫ್ಎಂಜಿಸಿ ಕ್ಲಸ್ಟರ್ ಸ್ಥಾಪನೆ ಮೂಲಕ ಒಂದು ಲಕ್ಷ ಉದ್ಯೋಗ ಸೃಜನೆಯಾಗಲಿವೆ. ಉತ್ತರ ಕರ್ನಾಟಕದ ಸರ್ವಾಂಗೀಣ ಪ್ರಗತಿಗೆ ಇದು ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದರು.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಅಮರನಾಥ ಯಾತ್ರೆ ಸ್ಥಗಿತ!