Publish Date: Fri, 28 Apr 2023 (09:22 IST)
Updated Date: Fri, 28 Apr 2023 (10:24 IST)
ಬೆಂಗಳೂರು : ಕರ್ನಾಟಕ ಚುನಾವಣೆಗೆ ಇನ್ನೆರಡು ವಾರ ಇರುವಾಗಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಕ್ಷದ ಚುನಾವಣಾ ಏಜೆಂಟ್ಗಳಿಗೆ ಬರೆದ ಪತ್ರವೊಂದು ಚರ್ಚೆಗೆ ಗ್ರಾಸವಾಗಿದೆ.
ಯಾವ್ಯಾವ ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ಘೋಷಿಸಬೇಕು? ಯಾವ ಭಾಗಗಳಲ್ಲಿ ಕೇಂದ್ರ ಸೇನಾ ಪಡೆಗಳು, ಅರೆಸೇನಾ ತುಕಡಿಗಳನ್ನು ನಿಯೋಜಿಸಬೇಕು? ಯಾವ್ಯಾವ ಮತಗಟ್ಟೆಗಳಿಗೆ ವೆಬ್ ಕ್ಯಾಸ್ಟಿಂಗ್ ಮತ್ತು ವೀಡಿಯೋ ರೆಕಾರ್ಡಿಂಗ್ ಸೇವೆ ಅಗತ್ಯವಿದೆ ಎಂಬುದನ್ನು ಪಟ್ಟಿ ಮಾಡಿ ಕೂಡಲೇ ಬಿಜೆಪಿ ಐಟಿ ಸೆಲ್ಗೆ ಮೇಲ್ ಮಾಡಬೇಕು ಎಂದು ಪಕ್ಷದ ಮುಖಂಡರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.