Publish Date: Sat, 05 Dec 2020 (11:56 IST)
Updated Date: Sat, 05 Dec 2020 (11:57 IST)
ಬೆಂಗಳೂರು : ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಟೌನ್ ಹಾಲ್ ಬಳಿ ಕನ್ನಡ ಪರ ಸಂಘಟನೆಗಳಿಂದ , ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ದಾಳಿ ನಡೆದಿದೆ. ಈಗಾಗಲೇ ಪೊಲೀಸರು 25 ಸಾವಿರ ಕನ್ನಡ ಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಹಾಗೇ ಕರವೇ ಅಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಭದ್ರತೆಯ ದೃಷ್ಟಿಯಿಂದ ಸಿಂಎ ನಿವಾಸಕ್ಕೆ ಭದ್ರತೆ ಏರ್ಪಡಿಸಲಾಗಿತ್ತು. ಇದೀಗ ಕರವೇ ಕಾರ್ತಕರ್ತರು ಸಿಎಂ ನಿವಾಸದ ಮೇಲೆ ಮುತ್ತಿಗೆ ಹಾಲು ಮುಂದಾದ ಹಿನ್ನೆಲೆಯಲ್ಲಿ ನಾರಾಯಣಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.